ಮಹಾರಾಷ್ಟ್ರ: ಮದ್ಯ ಕಳ್ಳಸಾಗಣೆದಾರರಿಂದ ದಾಳಿ; ಇಬ್ಬರು ಪೊಲೀಸರಿಗೆ ಗಾಯ!

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮದ್ಯದ ಕಳ್ಳಸಾಗಾಣಿಕೆದಾರರ ಗುಂಪು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಮುಂಜಾನೆ ಈ ಘಟನೆ ನಡೆದಿದ್ದು, ಕೇಂದ್ರಾಡಳಿತ ಪ್ರದೇಶವಾದ ದಮನ್‌ನಿಂದ ನಿಷೇಧಿತ ಮದ್ಯವನ್ನು ಸಾಗಿಸುತ್ತಿದ್ದ ಕಾರನ್ನು ಪಾಲ್ವಾರ್‌ನ ತಲಸಾರಿ ಪೊಲೀಸ್ ಠಾಣೆಯ ಸಿಬ್ಬಂದಿ ತಂಡವು ಗುರುತಿಸಿತ್ತು. ಪೊಲೀಸ್ ತಂಡ ಕಾರನ್ನು ಬೆನ್ನಟ್ಟಿದಾಗ, ಕಾರನ್ನು ಘೋಲ್ವಾಡ್ ಪ್ರದೇಶದಲ್ಲಿ ಬಿಟ್ಟು ಆರೋಪಿಗಳು ಓಡಿಹೋದರು ಎಂದು ಪೊಲೀಸ್ ವಕ್ತಾರ ಸಚಿನ್ ನವಡ್ಕರ್ ತಿಳಿಸಿದ್ದಾರೆ.

ಆದಾಗ್ಯೂ, ಸ್ವಲ್ಪ ಸಮಯದ ನಂತರ ಆರೋಪಿಗಳು 20 ರಿಂದ 25 ಜನರೊಂದಿಗೆ ವಾಪಸ್‌ ಬಂದು ಪೊಲೀಸ್ ತಂಡದ ಮೇಲೆ ಕೋಲುಗಳು ಮತ್ತು ಇತರ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಗಾಯಗೊಂಡಿದ್ದು, ದಾಳಿಕೋರರು ಎರಡು ಪೊಲೀಸ್ ವಾಹನಗಳನ್ನು ಸಹ ಹಾನಿಗೊಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೊಲೀಸರು ಶನಿವಾರ ನಾಲ್ಕು ಜನರನ್ನು ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 307 (ಕೊಲೆ ಯತ್ನ) ಮತ್ತು 353 (ಸಾರ್ವಜನಿಕ ಸೇವಕನನ್ನು ತನ್ನ ಕರ್ತವ್ಯ ನಿರ್ವಹಣೆಯಿಂದ ತಡೆಯಲು ಹಲ್ಲೆ ಅಥವಾ ಕ್ರಿಮಿನಲ್ ಫೋರ್ಸ್) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಕಾಣೆಯಾಗಿದ್ದ 56 ಯುವತಿಯರು ಮರಳಿ ಮನೆಗೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights