ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಿ: ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಹಿರಿಯ ಸಚಿವ ಕೆ.ಎಸ್. ಈಶ್ವರಪ್ಪ ಮಾಡಿರುವ ಗಂಭೀರ ಆರೋಪಗಳನ್ನು ಪರಿಗಣಿಸಿ, ರಾಜ್ಯಪಾಲರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಯಡಿಯೂರಪ್ಪ ಮೇಲೆ ಸಿಟ್ಟಾಗಿರುವ ಈಶ್ವರಪ್ಪ, ತಮ್ಮ ಇಲಾಖೆಯ ಕೆಲಸಗಳಿಗೆ ಯಡಿಯೂರಪ್ಪ ಅಡ್ಡಿ ಮಾಡುತ್ತಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾಗಿರುವ 1200 ಕೋಟಿ ರೂ.ಗೆ ಸಂಬಂಧಿಸಿದಂತೆ ಕಾನೂನು ಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಆರ್ಡಿಪಿಆರ್ ಇಲಾಖೆಯ ಅನುದಾನವನ್ನು ನೇರವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಂಚಿದ್ದಾರೆ ಎಂದು ರಾಜ್ಯಪಾಲ ವಜುಭಾಯಿವಾಲಾ ಅವರಿಗೆ ಲಿಖಿತ ದೂರು ನೀಡಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ಧರಾಗಿ ಉಳಿಯಬೇಕು” ಎಂದು ಒತ್ತಾಯಿಸಿದ್ದಾರೆ.
ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.
ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಬಿಜೆಪಿ ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿಯ ರಾಷ್ಟ್ರೀಯ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, @BJP4Karnataka ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರು ತನ್ನ ಸಂಶೋಧನೆ ಮೂಲಕ ಬಹಿರಂಗಗೊಳಿಸಿದ್ದಾರೆ.
6/10 pic.twitter.com/aoKgtMrJIr— Siddaramaiah (@siddaramaiah) April 1, 2021
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, ಬಿಜೆಪಿ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರು ತನ್ನ ಸಂಶೋಧನೆ ಮೂಲಕ ಬಹಿರಂಗಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರ 10% ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮರಾಜ್ಯ ಬಿಜೆಪಿ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ, ನೀವೇ ರಾಜ್ಯ ಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಮೋದಿ ಅವರೇ, “ನಾ ಖಾವುಂಗಾ, ನಾ ಖಾನೆ ದೂಂಗಾ” ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು “ಮೈ ಬಿ ಖಾವೂಂಗಾ, ತುಮ್ ಬಿ ಖಾವೋ” ಎಂದು ಬದಲಿಸಿ ಬಿಡಿ ಎಂದಿದ್ದಾರೆ.
ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು @BJP4Karnataka ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. @BJP4India ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು.
4/10 pic.twitter.com/3FZs4gL81M— Siddaramaiah (@siddaramaiah) April 1, 2021
ಆಪರೇಷನ್ ಕಮಲ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ ಎಂದಿದ್ದಾರೆ.
ರಾಜ್ಯದ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಯಡಿಯೂರಪ್ಪಗೆ ಎದುರಾಯ್ತು ಸಂಕಷ್ಟ: ಸಿಎಂ ಬಿಎಸ್ವೈ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ!

