ಇಂದಿನಿಂದ ದೆಹಲಿಯಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ…!

ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೆ ದೆಹಲಿಯಲ್ಲಿ ಇಂದಿನಿಂದ ಏಪ್ರಿಲ್ 30 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಪ್ರಾರಂಭಿಸಾಗುವುದು ಎಂದು ಸರ್ಕಾರ ತಿಳಿಸಿದೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ “ಪ್ರಸ್ತುತ ಪರಿಸ್ಥಿತಿಯ ಪ್ರಕಾರ, ನಾವು ಲಾಕ್ ಡೌನ್ ಹೇರುವ ಬಗ್ಗೆ ಯೋಚಿಸುತ್ತಿಲ್ಲ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ಸಾರ್ವಜನಿಕ ಸಮಾಲೋಚನೆಯ ನಂತರವೇ ಅಂತಹ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ತಿಳಿದ್ದರು.

ಆದರೆ ಸೋಮವಾರ, ದೆಹಲಿಯಲ್ಲಿ 3,548 ಹೊಸ ಪ್ರಕರಣಗಳು ಮತ್ತು 15 ಸಾವುಗಳು ದಾಖಲಾಗಿವೆ. ಕಳೆದ ತಿಂಗಳಿನಿಂದ ರಾಜಧಾನಿಯಲ್ಲಿ ಕೊರೋನವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ದೆಹಲಿ ಸರ್ಕಾರ ಕಠಿಣ ನೈಟ್ ಕರ್ಫ್ಯೂಗೆ ಆದೇಶಿಸಿದೆ. ರಾತ್ರಿ ಕರ್ಫ್ಯೂ ಸಮಯದಲ್ಲಿ ಸಂಚಾರವನ್ನು ನಿಲ್ಲಿಸಲಾಗುವುದಿಲ್ಲ ಮತ್ತು ವ್ಯಾಕ್ಸಿನೇಷನ್‌ಗೆ ಹೋಗುವವರಿಗೆ ಇ-ಪಾಸ್ ಮೂಲಕ ಅವಕಾಶ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗತ್ಯ ಸೇವೆಗಳಲ್ಲಿರುವವರು ಮತ್ತು ಪಡಿತರ, ಕಿರಾಣಿ ದಾಸ್ತಾನು, ತರಕಾರಿಗಳು, ಹಾಲು ಮತ್ತು ಔಷಧಿಗಳಿಗಾಗಿ ಗಂಟೆಗಳ ನಂತರ ಪ್ರಯಾಣಿಸಬೇಕಾದ ಚಿಲ್ಲರೆ ವ್ಯಾಪಾರಿಗಳಿಗೆ ಸಹ ಇದೇ ರೀತಿಯ ಪಾಸ್ಗಳೊಂದಿಗೆ ಅನುಮತಿಸಲಾಗುವುದು. ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದ ಪತ್ರಕರ್ತರು ಹೀಗೆ ಅವಕಾಶ ನೀಡಲಾಗಿದೆ. ಖಾಸಗಿ ವೈದ್ಯರು, ದಾದಿಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿಗೆ ಗುರುತಿನ ಚೀಟಿಗಳೊಂದಿಗೆ ಚಲಿಸಲು ಅವಕಾಶ ನೀಡಲಾಗುವುದು. ಗರ್ಭಿಣಿ ಮಹಿಳೆಯರಿಗೆ ಮತ್ತು ಚಿಕಿತ್ಸೆಯ ಅಗತ್ಯವಿರುವವರಿಗೂ ವಿನಾಯಿತಿ ನೀಡಲಾಗುವುದು.

ಅಗತ್ಯ ಸೇವೆಗಳಲ್ಲದೆ ಜನರ ಚಲನವಲನವನ್ನು ಪರಿಶೀಲಿಸಲು ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ದೆಹಲಿ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಮಹಾರಾಷ್ಟ್ರ ಮತ್ತು ರಾಜಸ್ಥಾನದಂತಹ ರಾಜ್ಯಗಳು ದೇಶಾದ್ಯಂತ ಕೋವಿಡ್ ಪ್ರಕರಣಗಳ ಹೆಚ್ಚಳದ ಮಧ್ಯೆ ಚಲನೆಯನ್ನು ನಿರ್ಬಂಧಿಸಲು ರಾತ್ರಿ ಕರ್ಫ್ಯೂಗಳನ್ನು ಪ್ರಾರಂಭಿಸಿವೆ. ಸೋಮವಾರ, ಭಾರತದಲ್ಲಿ ಮೊದಲ ಬಾರಿಗೆ 24 ಗಂಟೆಗಳಲ್ಲಿ ಪ್ರಕರಣಗಳ ಸಂಖ್ಯೆ ಒಂದು ಲಕ್ಷ ದಾಟಿದೆ.

ಮಹಾರಾಷ್ಟ್ರವು ವಾರಾಂತ್ಯದ ಲಾಕ್‌ಡೌನ್ ಮತ್ತು ರಾತ್ರಿ 8 ರಿಂದ ಬೆಳಿಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಘೋಷಿಸಿದೆ. ರಾಜಸ್ಥಾನದ ರಾತ್ರಿ ಕರ್ಫ್ಯೂ ರಾತ್ರಿ 8 ರಿಂದ ಬೆಳಿಗ್ಗೆ 6 ರವರೆಗೆ ಘೋಷಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights