ಅಸ್ಸಾಂ ಫಲಿತಾಂಶಕ್ಕೂ ಮುನ್ನವೇ ಆಪರೇಷನ್ ಕಮಲ?; 20 ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳು ರೆಸಾರ್ಟ್ಗೆ ಶಿಫ್ಟ್!
ಅಸ್ಸಾಂನಲ್ಲಿ ಕೆಳೆದ ನಾಲ್ಕುಗಳ ಹಿಂದೆಯಷ್ಟೇ ವಿಧಾನಸಭಾ ಚುನಾವಣೆ ಮುಗಿದಿದೆ. ಇನ್ನೂ ಫಲಿತಾಂಶ ಹೊರಬೀಳುವುದು ಬಾಕಿ ಇದೆ. ಹೀಗಿರುವಾಗಲೇ ರಾಜ್ಯದಲ್ಲಿ ಬಿಜೆಪಿ ಆಪರೇಷನ್ ಕಮಲದ ಸಾಧ್ಯತೆ ನಡೆಯುವ ಭೀತಿ ಎದುರಾಗಿದ್ದು, ಕಾಂಗ್ರೆಸ್ ಮತ್ತು ಅದರ ಮೈತ್ರಿಕೂಟದ 20 ಅಭ್ಯರ್ಥಿಗಳನ್ನು ಜೈಪುರಕ್ಕೆ ಕಾಂಗ್ರೆಸ್ ಶಿಫ್ಟ್ ಮಾಡಿದೆ.
ಮೂಲಗಳ ಪ್ರಕಾರ, ಹೆಚ್ಚಿನ ಅಭ್ಯರ್ಥಿಗಳು ಕಾಂಗ್ರೆಸ್ ಮಿತ್ರಪಕ್ಷವಾದ ಆಲ್-ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಗೆ ಸೇರಿದವರಾಗಿದ್ದಾರೆ.
ಅವರನ್ನು ಜೈಪುರದ ಹೊರವಲಯದಲ್ಲಿರುವ ಹೋಟೆಲ್ ಫೇರ್ಮಾಂಟ್ಗೆ ಕರೆದೊಯ್ಯಲಾಗಿದೆ. ಕಳೆದ ವರ್ಷ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಪಕ್ಷದ ಮುಖಂಡ ಸಚಿನ್ ಪೈಲಟ್ ದಂಗೆಯೆದ್ದಾಗ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಕೂಡಾ ರಾಜಸ್ಥಾನದ ಕಾಂಗ್ರೆಸ್ ಶಾಸಕರನ್ನು ಇದೇ ಹೋಟೆಲ್ನಲ್ಲಿ ಇರಿಸಲಾಗಿತ್ತು.
“ಅಸ್ಸಾಂನಿಂದ ಇಂದು ಸುಮಾರು 20 ಅಭ್ಯರ್ಥಿಗಳನ್ನು ಜೈಪುರಕ್ಕೆ ಸ್ಥಳಾಂತರಿಸಲಾಗಿದೆ” ಎಂದು ರಾಜಸ್ಥಾನ ಕಾಂಗ್ರೆಸ್ ಮುಖಂಡ ಮಹೇಶ್ ಜೋಶಿ ಹೇಳಿದ್ದಾರೆ.
“ಬಹುಮತ ಹೊಂದಿದ್ದರೂ ಬಿಜೆಪಿಯ ಕುದುರೆ ವ್ಯಾಪಾರದಿಂದಾಗಿ ಪಕ್ಷವು ಸರ್ಕಾರ ರಚಿಸಲು ಸಾಧ್ಯವಾಗದಂತೆ ನಡೆದ ಹಲವಾರು ಘಟನೆಗಳ ದೃಷ್ಟಿಯಲ್ಲಿಟ್ಟುಕೊಂಡು, ಮುನ್ನೆಚ್ಚರಿಕೆ ಕ್ರಮವಾಗಿ ಅಭ್ಯರ್ಥಿಗಳನ್ನು ಇಲ್ಲಿಗೆ ಕರೆತರಲಾಯಿತು” ಎಂದು ಕಾಂಗ್ರೆಸ್ನ ಮತ್ತೊಬ್ಬ ಮುಖಂಡರು ಹೇಳಿದ್ದಾರೆ.
ಬಿಜೆಪಿ ಅವರ ಯಾವುದೆ ಪ್ರಭಾವ ಬೀರದೆ ಇರಲು ಬೇಕಾಗಿ ಅಭ್ಯರ್ಥಿಗಳನ್ನು ಜೈಪುರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮೂರು ಹಂತದ ಅಸ್ಸಾಂ ವಿಧಾನಸಭಾ ಚುನಾವಣೆ ಏಪ್ರಿಲ್ 6 ರಂದು ಮುಕ್ತಾಯಗೊಂಡಿದ್ದು, ಫಲಿತಾಂಶ ಮೇ 2 ರಂದು ಹೊರಬರಲಿದೆ.
Read also: 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆ ಮಾಡಿಕೊಳ್ಳಲು ಸ್ವತಂತ್ರರು: ಸುಪ್ರೀಂ ಕೋರ್ಟ್

