ಲಾಕ್‌ಡೌನ್‌ ಡೌನ್‌-ಡೌನ್‌: ವಿಧಾನ ಸೌಧದಲ್ಲಿ ಘೋಷಣೆ ಕೂಗಿದ ಕಾಂಗ್ರೆಸ್‌!

ರಾಜ್ಯ ರಾಜಧಾನಿಯಲ್ಲಿ ಕೊರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಚಿವರು, ಶಾಸಕರು ಮತ್ತು ಅಧಿಕಾರಗಳ ಸಭೆ ನಡೆಯುತ್ತಿದೆ. ಸಿಎಂ ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸುತ್ತಿದ್ದಾರೆ. ಈ ವೇಳೆ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಬೇಡ, 144 ಸೆಕ್ಷನ್‌ ಜಾರಿ ಮಾಡಿ ಎಂದು ಕಾಂಗ್ರೆಸ್‌ ಶಾಸಕರು ಆಗ್ರಹಿಸಿದ್ದಾರೆ.

ಲಾಕ್‌ಡೌನ್‌ನಿಂದ ಪ್ರಯೋಜನಕ್ಕಿಂತ ಅಪಾಯವೇ ಹೆಚ್ಚು. ಲಾಕ್‌ಡೌನ್‌ ಜಾರಿ ಮಾಡುವ ಬದಲು ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಿ. ಜನದಟ್ಟಣೆ ನಿಯಂತ್ರಣಕ್ಕೆ ಪೊಲೀಸರಿಗೆ ಅಧಿಕಾರ ನೀಡಿ ಎಂದು ಒತ್ತಾಯಿಸಿರುವ ಕಾಂಗ್ರೆಸ್‌ ಮುಖಂಡರು, ಲಾಕ್‌ಡೌನ್‌ ಡೌನ್‌-ಡೌನ್‌ ಎಂದು ಘೋಷಣೆ ಕೂಗಿದ್ದಾರೆ.

ನೈಟ್ ಕರ್ಫ್ಯೂನಿಂದ ಕೊರೋನಾ ಹೋಗಲ್ಲ. ಬೆಂಗಳೂರಿನಲ್ಲಿ ಲಾಕ್ ಡೌನ್ ಬದಲಿಗೆ 144 ಸೆಕ್ಷನ್ ಜಾರಿಗೊಳಿಸಿ ಎಂದು ಶಾಸಕ ರಾಮಲಿಂಗ ರೆಡ್ಡಿ ಒತ್ತಾಯಿಸಿದ್ದಾರೆ.

ಕೋವಿಡ್ ಹೆಸರಿನಲ್ಲಿ ರಾಜಕೀಯ ಮಾಡುವುದು ಬೇಡ. ಕಳೆದ ಬಾರಿ ಫುಡ್ ಕಿಟ್ ಕೊಟ್ಟಾಗ ಬರೀ ಬಿಜೆಪಿ ಕ್ಷೇತ್ರಗಳಿಗೆ ಮಾತ್ರ ಕೊಟ್ಟಿದ್ದೀರಿ. ಹೀಗೆ ಮಾಡೋದು ಸರೀನಾ ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಗೋಕರ್ಣ ದೇವಾಲಯ ನಿರ್ವಹಣೆ ಮಾಜಿ ನ್ಯಾಯಮೂರ್ತಿ ನೇತೃತ್ವದ ಸಮಿತಿಗೆ ಹಸ್ತಾಂತರ: ಸುಪ್ರೀಂ ಕೋರ್ಟ್‌ ತೀರ್ಪು

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights