ಕಾಂಗ್ರೆಸ್ ನಾಯಕ ರಾಹುಲ್ಗಾಂಧಿಗೆ ಕೊರೊನಾ ಪಾಸಿಟಿವ್!
ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ, ವಯನಾಡು ಸಂಸದ ರಾಹುಲ್ಗಾಂಧಿ ಅವರಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಕ್ವಾರಂಟೈನ್ನಲ್ಲಿ ಇರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಅವರು ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕಿನ ಕೆಲವು ರೋಗಲಕ್ಷಣಗಳು ಕಾಣಿಸಿಕೊಂಡಿದ್ದು, ಕೊರೊನಾ ಪರೀಕ್ಷೆಗೆ ಒಳಗಾಗಿದ್ದೆ. ಈ ವೇಳೆ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕದಲ್ಲಿರುವ ಎಲ್ಲರೂ, ದಯವಿಟ್ಟು ಎಲ್ಲಾ ಸುರಕ್ಷತಾ ಪ್ರೋಟೋಕಾಲ್ಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ’ ಎಂದು ಪೋಸ್ಟ್ ಮಾಡಿದ್ದಾರೆ.
After experiencing mild symptoms, I’ve just tested positive for COVID.
All those who’ve been in contact with me recently, please follow all safety protocols and stay safe.
— Rahul Gandhi (@RahulGandhi) April 20, 2021
ದೇಶದಲ್ಲಿ ಕೊರೊನಾ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಪಶ್ಚಿಮ ಬಂಗಾಳದ ತಮ್ಮ ಎಲ್ಲಾ ಚುನಾವಣಾ ರ್ಯಾಲಿಗಳನ್ನು ರದ್ದು ಮಾಡಿರುವುದಾಗಿ ರಾಹುಲ್ಗಾಂಧಿ ಹೇಳಿದ್ದರು. ಅಲ್ಲದೆ, ಇತರ ಪಕ್ಷಗಳೂ ಚುನಾವಣಾ ರ್ಯಾಲಿಗಳನ್ನು ರದ್ದುಮಾಡಿ ಎಂದು ಮನವಿ ಮಾಡಿದ್ದರು.
ಕಾಂಗ್ರೆಸ್ಸಿನ ಮತ್ತೊಬ್ಬ ಹಿರಿಯ ಮುಖಂಡ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೂ ಕೊರೊನಾ ತಗುಲಿರುವುದು ಸೋಮವಾರ ದೃಢಪಟ್ಟಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಶವ ವಾಹನಗಳ ಮುಂದೆ ಬಿಜೆಪಿ ಮುಖಂಡರ ಫೋಟೋಶೂಟ್; ನಾಚಿಕೆಗೇಡು ಎಂದ ಕಾಂಗ್ರೆಸ್!

