ಜನ ಬಯಸುವುದು ನೆರವಿನ ಹಸ್ತವನ್ನ; ನಿಮ್ಮ ಬುರುಡೆ ಮಾತನ್ನಲ್ಲ: ಮೋದಿ ವಿರುದ್ದ ಸಿದ್ದರಾಮಯ್ಯ ಆಕ್ರೋಶ

ಕೊರೊನಾ ಉಲ್ಭಣವಾದ ಕಾರಣದಿಂದಾಗಿ ಲಾಕ್‌ಡೌನ್ ಅನಿವಾರ್ಯ ಎಂಬಂತೆ ರಾಜ್ಯ bJP ಸರ್ಕಾರ ಮಾತನಾಡುತ್ತಿದೆ. ಲಾಕ್ ಡೌನ್ ಹೇರಿದರೆ ಕಷ್ಟನಷ್ಟಕ್ಕೀಡಾಗುವ ಜನತೆಗೆ ಕೇಂದ್ರ ಬಿಜೆಪಿ ಸರ್ಕಾರ ನೀಡುವ ನೆರವಿನ ಘೋಷಣೆಯನ್ನು ಜನ ನಿರೀಕ್ಷಿಸಿದ್ದರು. ಮೋದಿ ಭಾಷಣ ‘ನಿಮ್ಮ ತಲೆ ಮೇಲೆ ನಿಮ್ಮ‌ ಕೈ’ ಎಂಬ ಸಂದೇಶ ನೀಡಿದೆ ಎಂದು ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಇಂದು ರಾತ್ರಿ ಪ್ರಧಾನಿ ಮೋದಿ ಅವರು ಮಾಡಿದ ಭಾಷಣ ಅತ್ಯಂತ ನಿರಾಶದಾಯಕ. ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ, ಐಸಿಯು ಹಾಸಿಗೆಗಳಿಲ್ಲದೆ,‌ ರೆಮಿಡಿಸಿವೆರ್‌ನಂತಹ ಪ್ರಾಣರಕ್ಷಕ ಔಷಧಿ ಸಿಗದೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ಮೋದಿಅವರು ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ. ಪ್ರಧಾನಿಗಳೇ, ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ ಎಂದು ಒತ್ತಾಯಿಸಿದ್ದಾರೆ.

ಕೊರೊನಾ ಪರಿಣಾಮವನ್ನು ಸಮರ್ಥವಾಗಿ ನಿರ್ವಹಿಸಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಬಿಜೆಪಿ  ಸರ್ಕಾರವೂ ಕಾರಣ. ಪ್ರಧಾನಿಯವರೇ, ನೀವು ವಿಶೇಷ ಆರ್ಥಿಕ ನೆರವು ಕೊಡುವುದು ಬೇಡ , ನಮ್ಮ ನ್ಯಾಯಬದ್ಧ ಪಾಲನ್ನಷ್ಟಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ ಎಂದಿದ್ದಾರೆ.

ಇದನ್ನೂ ಓದಿ: ದೇಶವನ್ನು ಲಾಕ್‌ಡೌನ್ ಮಾಡುವಂತೆ ವರ್ತಿಸಬೇಡಿ; ದೇಶವನ್ನುದ್ದೇಶಿಸಿ ಮೋದಿ ಮಾತುಗಳ ಮುಖ್ಯಾಂಶಗಳು!‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights