ಆಸ್ಪತ್ರೆಯಲ್ಲಿ 22 ಕೊರೊನಾ ರೋಗಿಗಳ ಸಾವು; ಅಪರಿಚಿತರ ವಿರುದ್ದ FIR ದಾಖಲು!

ಸರಿಯಾದ ಸಮಯಕ್ಕೆ ಆಮ್ಲಜನಕ ಪೂರೈಕೆಯಾಗದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ನಾಸಿಕ್‌ನ ಆಸ್ಪತ್ರೆಯಲ್ಲಿ 22 ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ದ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಸಿಕ್ ಮುನ್ಸಿಪಲ್ ಕಾರ್ಪೊರೇಷನ್ (ಎನ್‌ಎಂಸಿ) ನಡೆಸುತ್ತಿರುವ ಡಾ. ಝಾಕಿರ್‌ ಹುಸೇನ್‌ ಆಸ್ಪತ್ರೆಯಲ್ಲಿ ಆಮ್ಲಜನಕ ಶೇಖರಣಾ ಘಟಕದ ಅಸಮರ್ಪಕ ನಿರ್ವಹಣೆಯಿಂದಾಗಿ ರೋಗಿಗಳಿಗೆ ಆಮ್ಲಜನಕ ಪೂರೈಕೆ ಇದ್ದಕ್ಕಿದ್ದಂತೆ ನಿಂತುಹೋಗಿದೆ. ಇದರಿಂದಾಗಿ 22 ಕೊರೊನಾ ರೋಗಿಗಳು ಸಾವನ್ನಪ್ಪಿದ್ದಾರೆ.

ಭಾರತೀಯ ದಂಡ ಸಂಹಿತೆ ಸೆಕ್ಷನ್ 304-ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗಿದೆ) ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಮಹಾರಾಷ್ಟ್ರದ ನಾಸಿಕ್ ನಗರದ ಭದ್ರಾಕಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆ ನಡೆದಾಗ 150 ಹಾಸಿಗೆಗಳಿರುವ ಕೊವಿಡ್‌ ಆಸ್ಪತ್ರೆಯಲ್ಲಿ ಒಟ್ಟು 157 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎನ್‌ಎಂಸಿ ತಿಳಿಸಿದೆ.

ಮೃತರ ಪೈಕಿ 10 ಮಹಿಳೆಯರು ಇದ್ದು, ಎಲ್ಲರೂ 33 ರಿಂದ 74 ವರ್ಷದೊಳಗಿನವರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಆಕ್ಸಿಜನ್‌ಗಾಗಿ ಭಿಕ್ಷೆ ಬೇಡಿ, ಇಲ್ಲವೇ ಕದ್ದುಕೊಂಡು ಬನ್ನಿ: ಕೇಂದ್ರದ ವಿರುದ್ಧ ಹೈಕೋರ್ಟ್‌ ಗರಂ

ಶೇಖರಣಾ ಘಟಕದಲ್ಲಿ ಸೋರಿಕೆ ಕಂಡುಬಂದಿದ್ದರಿಂದಾಗಿ ವೈದ್ಯಕೀಯ ಆಮ್ಲಜನಕದ ಪೂರೈಕೆಯಲ್ಲಿ ಅಡ್ಡಿ ಉಂಟಾಗಿದೆ ಎಂದು ಅಧಿಕಾರಿಗಳು ಈ ಹಿಂದೆ ತಿಳಿಸಿದ್ದರು.

ಟ್ಯಾಂಕರ್‌ನಿಂದ ಟ್ಯಾಂಕ್‌ಗಳಿಗೆ ಆಮ್ಲಜನಕವನ್ನು ತುಂಬುತ್ತಿರುವಾಗ ಸೋರಿಕೆ ಉಂಡಾಗಿದೆ. ಇದರಿಂದಾಗಿ  ವೆಂಟಿಲೇಟರ್‌ಗಳಲ್ಲಿದ್ದ ರೋಗಿಗಳಿಗೆ ಮತ್ತು ಉಸಿರಾಟಕ್ಕಾಗಿ ಆಮ್ಲಜನಕವನ್ನು ಅವಲಂಬಿಸಿರುವವರಿಗೆ ಆಕ್ಸಿಜನ್‌ ಪೂರೈಕೆಗೆ ತೊಂದರೆಗ ಉಂಟಾಗಿದೆ.

ಘಟನೆಯ ಬಗ್ಗೆ ತನಿಖೆ ನಡೆಸಲು ಏಳು ಸದಸ್ಯರ ಸಮಿತಿಯನ್ನು ಮಹಾರಾಷ್ಟ್ರ ಸರ್ಕಾರ ನೇಮಿಸಿದೆ. ಸಾವನ್ನಪ್ಪಿದ ಪ್ರತಿ ಸಂತ್ರಸ್ತರ ಕುಟುಂಬಗಳಿಗೆ 5 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಆಕ್ಸಿಜನ್‌ ಕೊರತೆ; ಭಾರತದಿಂದ ವಿದೇಶಕ್ಕೆ ರಫ್ತಾದ ಆಕ್ಸಿಜನ್‌ ಪ್ರಮಾಣ 734% ಹೆಚ್ಚಳ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights