ಮೋದಿ ಜವಾಬ್ದಾರಿಯಿಂದ ನುಣುಚಿಕೊಳ್ಳುವುದರಲ್ಲಿ ಪ್ರವೀಣರು: ಕೇಂದ್ರದ ವಿರುದ್ದ ವಿತ್ತ ಸಚಿವೆ ನಿರ್ಮಲಾ ಅವರ ಪತಿ ಆಕ್ರೋಶ!

ಕೊರೊನಾ ಸೋಂಕು ತೀವ್ರತೆ ಪಡೆದುಕೊಂಡಿರುವ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರದ ಕಾರ್ಯವೈಖರಿಯ ವಿರುದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಡಾ. ಪರಕಾಲ ಪ್ರಭಾಕರ ಅವರು ಕಿಡಿಕಾರಿದ್ದಾರೆ.

ಸರ್ಕಾರವು ಜನರ ಭಾವನೆಗಳಿಗೆ ಸ್ಪಂದಿಸುವ ಗುಣ ಕಳೆದು ಕೊಂಡಿದೆ. ಪ್ರಧಾನಿಯವರು ಮಾತಿನ ವೈಖರಿ, ಚಾಣಾಕ್ಷತನಗಳ ಮೂಲಕ ಜವಾಬ್ದಾರಿಯಿಂದ ನುಣುಸಿಕೊಳ್ಳುವ ಪ್ರಾವಿಣ್ಯತೆ ಪಡೆದುಕೊಂಡಿದ್ದಾರೆ. ಪಾರದರ್ಶಕ, ಜವ್ದಾರಿಯುತ ಆಡಳಿತ ನಡೆಸುವವರು ಇತಿಹಾಸದಲ್ಲಿ ದಾಖಲಾಗುತ್ತಾರೆ. ಪ್ರಧಾನಿಯವರು ಈಗಲಾದರೂ ಸೂಕ್ತವಾದ ಮಾರ್ಗವನ್ನು ಆರಿಸಿಕೊಳ್ಳಬೇಕು. ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಅವರು ಹೇಳಿದ್ದಾರೆ.

‘ಮಿಡ್‌ವೀಕ್‌ ಮ್ಯಾಟರ್ಸ್‌’ ಭಾಷಣದಲ್ಲಿ ಮಾತನಾಡಿರುವ ಅವರು, ಭಾರತವು ಈಗ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದೆ. ಕಳೆದ ಒಂದು ವಾರದ ವಿದ್ಯಮಾನಗಳನ್ನು ಗಮನಿಸಿದರೆ, ನಾವು ಎಂಥ ಪರಿಸ್ಥಿತಿ ಯಲ್ಲಿ ಇದ್ದೇವೆ, ಕೇಂದ್ರ ಸರ್ಕಾರದ ಸಿದ್ಧತೆ ಹೇಗಿದೆ, ರಾಜಕೀಯ ವ್ಯವಸ್ಥೆಯ ಹೊಣೆಗಾರಿಕೆ ಯಾವ ಮಟ್ಟದಲ್ಲಿದೆ ಬಗ್ಗೆ ಚಿತ್ರಣ ಸಿಗುತ್ತದೆ. ನಾವು ಎರಡನೇ ಅಲೆಯನ್ನು ಎದುರಿಸಲು ಸಿದ್ಧರಾಗಿಲ್ಲ ಎಂಬುದು ಸ್ಪಷ್ಟ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Fact Check: ಆನ್‌ಲೈನ್ ಡೆತ್ ಸರ್ಟಿಫಿಕೇಟ್‌ನಲ್ಲಿ ಪ್ರಧಾನಿ ಮೋದಿಯವರ ಫೋಟೋ ಇರುವುದು ಸುಳ್ಳು!

ಸಿದ್ಧತೆಯ ಬಗ್ಗೆ ಏನೇ ಕೇಳಿದರೂ ಉತ್ತರಿಸುವ ಮನಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಇಲ್ಲ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನೀಡಿದ ಸಲಹೆಗಳಿಗೆ ಕೇಂದ್ರದ ಆರೋಗ್ಯ ಸಚಿವರಿಂದ ಅಸಡ್ಡೆಯ ಉತ್ತರ ಸಿಕ್ಕಿತು. ಇದು ಜವಾಬ್ದಾರಿ ಇರುವ ಸರ್ಕಾರದ ನಡೆಯಲ್ಲ ಎಂದು ಹೇಳಿದ್ದಾರೆ.

ರಾಜಕೀಯದವರಿಗೆ ಚುನಾವಣೆ ಮುಖ್ಯ. ಧಾರ್ಮಿಕ ಮುಖಂಡರಿಗೆ ತಮ್ಮ ಆಚರಣೆಗಳು ಮುಖ್ಯವೆನಿಸಿದೆ. ಚುನಾವಣಾ ರ‍್ಯಾಲಿ ಗಳಲ್ಲಿ ಪ್ರಧಾನಿ, ಕೇಂದ್ರ ಸಚಿವರು, ಪ್ರತಿಪಕ್ಷಗಳ ನಾಯಕರು ಭಾಗಿಯಾಗುತ್ತಾರೆ. ಕುಂಭಮೇಳದಲ್ಲಿ ಸಾವಿರಾರು ಜನ ಶಾಹಿಸ್ನಾನ ಮಾಡುತ್ತಾರೆ ಇದು ವಿಪರ್ಯಾಸ ಎಂದು ಹೇಳಿದ್ದಾರೆ.

ಕೊರೊನಾ ಉಲ್ಬಣದ ಹಿನ್ನೆಲೆಯಲ್ಲಿ  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ ರ‍್ಯಾಲಿಗಳನ್ನು ರದ್ದುಪಡಿಸಿದರು. ಆದರೆ ವಿವಿಧ ಪಕ್ಷಗಳ ಅಭ್ಯರ್ಥಿಗಳು ಕೋವಿಡ್‌ ನಡುವೆಯೇ ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದಲ್ಲಿ ಭಾಗಿಯಾದರು. ಚುನಾವಣಾ ರ‍್ಯಾಲಿ ಹಾಗೂ ಕುಂಭಮೇಳಗಳನ್ನು ಕೆಲವರು ಸಮರ್ಥಿಸಿಕೊಂಡರು. ಇದು ನಿಜಕ್ಕೂ ಬೇಸರದ ಸಂಗತಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ರಾಜಧಾನಿಗೆ ಮತ್ತೊಂದು ಶಾಕ್‌; ಲಾಕ್‌ಡೌನ್‌ ಒಂದು ವಾರ ವಿಸ್ತರಣೆ ಸಾಧ್ಯತೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights