ಬಳ್ಳಾರಿ ಪಾಲಿಕೆ ಚುನಾವಣೆ: ಕಾಂಗ್ರೆಸ್‌ ಭರ್ಜರಿ ಗೆಲುವು; ಈ ಬಾರಿಯೂ ಅಧಿಕಾರದಿಂದ ದೂರ ಉಳಿದ ಬಿಜೆಪಿ!

ಕೋವಿಡ್‌ ಸಂದರ್ಭದ ನಡುವೆಯೂ ಹೆಚ್ಚು ಸದ್ದಿಲ್ಲದೆ ನಡೆದ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿದ್ದು, ಬಿಜೆಪಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿರುವ ಒಟ್ಟು 39 ವಾರ್ಡ್ ಗಳ ಪೈಕಿ ಕಾಂಗ್ರೆಸ್ 21 ಸ್ಥಾನಗಳನ್ನು ಗೆದ್ದಿದ್ದು, ಅಧಿಕಾರದ ಗದ್ದುಗೆಯನ್ನು ವಶಪಡಿಸಿಕೊಂಡಿದೆ. ಇನ್ನು ಬಿಜೆಪಿ 13 ಸ್ಥಾನಗಳನ್ನು ಪಡೆದುಕೊಂಡಿದ್ದು ಎರಡನೇ ಸ್ಥಾನದಲ್ಲಿದೆ. ಪಾಲಿಕೆಯಲ್ಲಿ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ. ಉಳಿದಂತೆ, 05 ಸ್ಥಾನಗಳಲ್ಲಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ.

ಬಳ್ಳಾರಿ ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬೆಳಗ್ಗೆ ಮತ ಎಣಿಕೆ ಕಾರ್ಯ ಶುರುವಾಗಿದ್ದು, ಈಗಾಗಲೇ ಎಲ್ಲಾ ವಾರ್ಡ್ ಗಳ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, 39 ವಾರ್ಡ್ ಗಳಲ್ಲಿ ಕಾಂಗ್ರೆಸ್ 21 ರಲ್ಲಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಹಿಡಿದಿದೆ.

2016ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಪಡೆಯಬೇಕು ಎಂದು ಭಾರೀ ಹಣಾಹಣಿ ನಡೆಸಿತ್ತು. ಆದರೂ, ಗೆಲ್ಲಲು ಸಾಧ್ಯವಾಗಲಿಲ್ಲ. ಈ ಬಾರಿಯಾದರೂ ಅಧಿಕಾರ ಹಿಡಿಯಲು ಬಿಜೆಪಿ ಭಾರೀ ಕಸರತ್ತು ನಡೆಸಿತು. ಶ್ರೀ ರಾಮುಲು ಅವರು ಕೊವಿಡ್‌ ನಿಯಮಗಳನ್ನು ಗಾಳಿಗೆ ತೂರಿ ಪ್ರಚಾರ ನಡೆಸಿದ್ದರು. ಆದರೆ, ಈ ಬಾರಿಯೂ ಬಿಜೆಪಿ ವಿರೋಧ ಪಕ್ಷವಾಗಿಯೇ ಉಳಿದಿದೆ.

ಇದನ್ನೂ ಓದಿ: ಮೂಗಿಗೆ ನಿಂಬೆರಸ ಹಾಕಿಕೊಂಡ ಶಿಕ್ಷಕ ದಾರುಣ ಸಾವು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights