ಬಸವ ಕಲ್ಯಾಣದಲ್ಲಿ BJP ಅಭ್ಯರ್ಥಿ ಶರಣು ಸಲಗರ ಗೆಲುವು: ಕಾಂಗ್ರೆಸ್‌ಗೆ ಭಾರೀ ನಿರಾಶೆ!

ಪಂಚರಾಜ್ಯ ಚುನಾವಣೆ ಮಧ್ಯೆ ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆ ಗಮನ ಸೆಳೆದಿದ್ದು, ಚತುಷ್ಕೋನ ಸ್ಪರ್ಧೆಗೆ ಸಾಕ್ಷಿಯಾಗಿದ್ದ ಬಸವ ಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಶರಣು ಸಲಗರ ಅವರು ಕಾಂಗ್ರೆಸ್‌ ಅಭ್ಯರ್ಥಿ ಮಾಲಾ ನಾರಾಯಣರಾವ್‌ ವಿರುದ್ದ ಸುಮಾರು 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಗೆಲುವು ಸಾಧಿಸಿರುವ ಶರಣು ಸಲಗರ ಅವರು 70,556 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್‌ ಅಭ್ಯರ್ಥಿ ಮಾಲಾ ನಾರಾಯಣರಾವ್‌ ಅವರು 50,107 ಮತಗಳನ್ನು ಪಡೆದುಕೊಂಡಿದ್ದಾರೆ.

ಗೆಲುವಿನ ಬಗ್ಗೆ ಹರ್ಷ ವ್ಯಕ್ತಪಡಿಸಿದರುವ ಮುಖ್ಯಮಂತ್ರಿ ಯಡಿಯೂರಪ್ಪ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷಕ್ಕೆ ಆಶೀರ್ವದಿಸಿದ ಕ್ಷೇತ್ರದ ಎಲ್ಲ ಮತದಾರ ಬಂಧುಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಕ್ಷೇತ್ರದ ಜನರ ವಿಶ್ವಾಸ ಗಳಿಸಿ, ಗೆಲುವು ಸಾಧಿಸಿದ ನಮ್ಮ ಅಭ್ಯರ್ಥಿ ಶ್ರೀ ಶರಣು ಸಲಗರ ಅವರಿಗೆ ಮತ್ತು ಅಲ್ಲಿನ ಎಲ್ಲಾ ನಮ್ಮ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

ಬಸವ ಕಲ್ಯಾಣದಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದ ನಾರಾಯಣರಾವ್‌ ಅವರ ಅಕಾಲಿಕ ನಿಧನದಿಂದ ಕ್ಷೇತ್ರ ತೆರವಾಗಿತ್ತು. ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ನಾರಾಯಣರಾವ್‌ ಅವರ ಪತ್ನಿ ಮಾಲಾ ನಾರಾಯಣರಾವ್‌, ಬಿಜೆಪಿಯಿಂದ ಶರಣು ಸಲಗರ, ಜೆಡಿಎಸ್‌ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ ಹಾಗೂ ಪಕ್ಷೇತರ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖೂಬಾ ಸ್ಪರ್ಧಿಸಿದ್ದರು. ಏಪ್ರಿಲ್‌ 17 ರಂದು ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು.

Read Also: ತಮಿಳಲ್ಲಿ ಮತ್ತೆ ಸೂರ್ಯೋದಯ: ಅಧಿಕಾರದತ್ತ ಡಿಎಂಕೆ; ಸ್ಟಾಲಿನ್‌ಗೆ ಸಿಎಂ ಖುರ್ಚಿ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights