‘ಚಾಮರಾಜನಗರದಲ್ಲಿ ಆಕ್ಸಿಜನ ಕೊರತೆಯಿಂದ 24 ಅಲ್ಲ 34 ಜನ ಸಾವನ್ನಪ್ಪಿದ್ದಾರೆ’- ಶಾಸಕ ಪುಟ್ಟರಂಗಶೆಟ್ಟಿ ಗಂಭೀರ ಆರೋಪ

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟಿಲ್ಲಿ ಬದಲಿಗೆ 34 ಜನ ಮೃತಪಟ್ಟಿದ್ದಾರೆಂದು ಶಾಸಕ ಪುಟ್ಟರಂಗಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪುಟ್ಟರಂಗಶೆಟ್ಟಿ, “ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನ ಅಲ್ಲ 34 ಜನ ಸತ್ತಿದ್ದಾರೆ. 10 ಜನರ ಹೆಸರು ಪಟ್ಟಿಯಲ್ಲಿ ಇಲ್ಲ. ಮೃತರ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ” ಎಂದು ಆರೋಪ ಮಾಡಿದ್ದಾರೆ.

ಹೀಗಾಗಿ ಘೋರ ದುರಂತ ಸಂಭವಿಸಿದ ಘಟನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಆಕ್ಸಿಜನ್ ಕೊರತೆಯಿಂದ 24 ಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆಯಾದರೂ ಸಮಗ್ರ ಕೂಲಂಕಷ ತನಿಖೆ ನಡೆಸಲು ತೀರ್ಮಾನಿಸಿರುವ ರಾಜ್ಯ ಸರ್ಕಾರ, ಐಎಎಸ್ ಅಧಿಕಾರಿ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿದೆ.

ಸರ್ಕಾರಕ್ಕೆ ಮೂರು ದಿನಗಳೊಳಗೆ ವರದಿ ಸಲ್ಲಿಸುವಂತೆ ಶಿವಯೋಗಿ ಕಳಸದ ಅವರಿಗೆ ಸರ್ಕಾರ ಸೂಚಿಸಿದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights