ಕೈಮೀರಿದ ಕೊರೊನಾ : ಕೊಡಗಿನಲ್ಲಿ 5 ದಿನ ಸಂಪೂರ್ಣ ಲಾಕ್ ಡೌನ್..!

ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು, ಜನರ ನಿದ್ದೆಗೆಡಿಸಿದೆ. ಕೆಲ ಗ್ರಾಮಗಳಲ್ಲಿ ಅರ್ಧಕ್ಕಿಂತ ಹೆಚ್ಚಿನ ಜನರಿಗೆ ಸೋಂಕು ತಗುಲಿರುವುದು ದೃಢವಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ ಸಂಪೂರ್ಣವಾಗಿ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದೆ.

ಹೌದು… ಕೊರೊನಾ ಸೋಂಕು ಎಗ್ಗಿಲ್ಲದೇ ಮನುಷ್ಯನ ದೇಹ ಸೇರಿಕೊಳ್ಳುತ್ತಿದೆ. ಎಷ್ಟೇ ಪ್ರಯತ್ನ ಪಟ್ಟರೂ ಇದರ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಹೀಗಾಗಿ ಜಿಲ್ಲಾಡಳಿತ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಿದೆ. ವಾರದ ಐದು ದಿನ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ. ವಾರದಲ್ಲಿ ಎರಡು ದಿನದಲ್ಲಿ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಅಂದರೆ ಗುರುವಾರ ಮತ್ತು ಶುಕ್ರವಾರ ಬೆಳಿಗ್ಗೆ ಆರರಿಂದ ಮಧ್ಯಾಹ್ನ ಎರಡು ಗಂಟೆಯವರೆಗೆ ಮಾತ್ರ ಮಾತ್ರ ಜನ ಅಗತ್ಯ ವಸ್ತುಗಳನ್ನು ಖರೀದಿ ಮಾಡಬಹುದು. ಮದ್ಯ ಮಾರಾಟಕ್ಕೂ ಮಂಗಳವಾರ ಮತ್ತು ಶುಕ್ರವಾರ ಮಾತ್ರವೇ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆವರೆಗೆ ಅವಕಾಶ ನೀಡಲಾಗಿದ್ದು ಪಾರ್ಸಲ್ ತೆಗೆದುಕೊಂಡು ಹೋಗಬಹುದು. ದಿನ ಬಳಕೆಗೆ ಆಹಾರ ಪದಾರ್ಥಗಳು, ಅಗತ್ಯ ವಸ್ತುಗಳ ಖರೀದಿಗಾಗಿ ಪ್ರತೀ ದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

ಲಾಕ್ ಡೌನ್ ಸಂದರ್ಭದಲ್ಲಿ ಅಗತ್ಯ ಹಾಗೂ ತುರ್ತು ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಮೆಡಿಕಲ್ ಹಾಗೂ ಚಿಕಿತ್ಸೆ ಗೆ ಸಂಬಧಿಸಿದ ಸೇವೆಗಳಿಗೆ ಅವಕಾಶ ನೀಡಲಾಗಿದೆ.

ಕೊಡಗು ಜಿಲ್ಲೆಗೆ ಹೊರ ಜಿಲ್ಲೆ ಮತ್ತು ಹೊರ ದೇಶಗಳಿಂದ ಬರುವವರಿಗೆ ಕಡ್ಡಾಯವಾಗಿ ಸೀಲು ಹಾಕಿ ಹದಿನಾಲ್ಕು ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಪೊನ್ನಂಪೇಟೆ, ವಿರಾಜಪೇಟೆ, ಸೋಮವಾರಪೇಟೆಯ ಬಹುತೇಕ ಗ್ರಾಮಸ್ಥರಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ವಾರದ ೆರಡು ದಿನ ಹೊರತುಪಡಿಸಿ ಉಳಿದ ಐದು ದಿನ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights