ಮೇ10 ರಿಂದ 24ರ ವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್’ಡೌನ್ ಘೋಷಣೆ!
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಸೋಂಕು ವೇಗವಾಗಿ ಹರಡುತ್ತಿದೆ. ಕರ್ಫ್ಯೂ ಜಾರಿ ಗೊಳಿಸಿದರೂ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೇ 10 ರಿಂದ 24ರ ವರೆಗೆ ಸಂಪೂರ್ಣ ಲಾಕ್’ಡೌನ್ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಅಧಿಕತವಾಗಿ ಘೋಷಣೆ ಮಾಡಿದ ಸಿಎಂ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಮೇ 10ರ ಬೆಳಿಗ್ಗೆ 6.30ರಿಂದ 24ರ ಬೆಳಿಗ್ಗೆ 6.30ರವರೆಗೆ ಸಂಪೂರ್ಣ ಲಾಕ್ಡೌನ್ ಮಾಡುವುದಾಗಿ ಘೋಷಿಸಿದ್ದಾರೆ.
ವೇಗವಾಗಿ ಹರಡುತ್ತಿರುವ ಕೊರೊನಾ ತಡೆಗೆ ಸದ್ಯ ಸಂಪೂರ್ಣ ಲಾಕ್ ಡೌನ್ ಒಂದೇ ದಾರಿಯಾಗಿದ್ದು, ತಜ್ಞರ ಸಲಹೆ ಮೇರೆಗೆ ಸಿಎಂ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ.
ಸಂಪೂರ್ಣ ಲಾಕ್ ಡೌನ್ ವೇಳೆ ತುರ್ತು ಸಂದರ್ಭಗಳನ್ನು ಹೊರತುಪಡಿಸಿ ಯಾವುದೇ ಕಾರಣಕ್ಕೂ ಮನೆಯಿಂದ ಹೊರ ಬರುವಂತಿಲ್ಲ. ಎಲ್ಲಾ ಹೋಟೆಲ್ಗಳು, ಪಬ್ಗಳು ಮತ್ತು ಬಾರ್ಗಳು ಮುಚ್ಚಲ್ಪಡುತ್ತವೆ. ತಿನಿಸುಗಳು, ಮಾಂಸದ ಅಂಗಡಿಗಳು ಮತ್ತು ತರಕಾರಿ ಅಂಗಡಿಗಳು ಬೆಳಿಗ್ಗೆ 6ರಿಂದ10ರವರೆಗೆ ಮಾತ್ರ ಕಾರ್ಯನಿರ್ವಹಿಸಬಹುದು.
ಇದೇ ವೇಳೆ ಲಾಕ್ ಡೌನ್ ವೇಳೆ ಎಲ್ಲಾ ಪಾರ್ಸೆಲ್ ಬಿಟ್ಟು ಹೋಟೆಲ್ಗಳು, ಪಬ್ಗಳು ಮತ್ತು ಬಾರ್ಗಳು ಮುಚ್ಚಲ್ಪಡುತ್ತವೆ. ಬೆಳಿಗ್ಗೆ 6ರಿಂದ10ರವರೆಗೆ ಮಾತ್ರ ತಿನಿಸುಗಳು, ಮಾಂಸದ ಅಂಗಡಿಗಳು ಮತ್ತು ತರಕಾರಿ ಅಂಗಡಿಗಳು ಕಾರ್ಯನಿರ್ವಹಿಸಬಹುದು. ಬೆಳಗ್ಗೆ 10 ಗಂಟೆಯ ಬಳಿಕ ಯಾರೂ ಕೂಡ ರಸ್ತೆಗಳಲ್ಲಿ ಓಡಾಡುವಂತಿಲ್ಲ, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಗತ್ಯ ವಸ್ತುಗಳ ಸರಬರಾಜಿಗೆ ಗೂಡ್ಸ್ ವಾಹನಗಳ ಓಡಾಟ ಇರಲಿದ್ದು, ಆನ್ಲೈನ್ ಡೆಲಿವರಿ ಸರ್ವಿಸ್ಗೂ ಅವಕಾಶ ನೀಡಲಾಗಿದೆ ಎಂದು ಹೇಳಿದರು.

