ಲಾಕ್ ಡೌನ್ ನಿಂದಾಗಿ 14 ದಿನಗಳ ಕಾಲ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ವಿತರಣೆ!
ಲಾಕ್ ಡೌನ್ ನಿಂದಾಗಿ 14 ದಿನಗಳ ಕಾಲ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ವಿತರಣೆ ಮಾಡಲು ಪೌರಾಡಳಿತ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ರಾಜ್ಯದಲ್ಲಿ ಲಾಕ್ ಡೌನ್ ನಿಂದಾಗಿ ಅನೇಕ ಜನ ಒಂದೊಂತ್ತಿನ ಅನ್ನಕ್ಕೂ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಕೊರೊನಾ ಸಂತ್ರಸ್ತರಿಗೆ ನೆರವಾಗಲು 14 ದಿನಗಳ ಕಾಲ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ನೀಡಲು ನಿರ್ಧರಿಸಲಾಗಿದೆ. ಈ ಮೂಲಕ ಕೂಲಿ ಕಾರ್ಮಿಕರಿಗೆ,ವಲಸಿಗರಿಗೆ, ದುರ್ಬಲ ವರ್ಗದವರಿಗೆ ಸರ್ಕಾರ ಆಸರೆಯಾಗಿದೆ.
ಇಂದಿರಾ ಕ್ಯಾಂಟೀನ್ ನಲ್ಲಿ ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟ ಉಚಿತವಾಗಿ ನೀಡಲಾಗುತ್ತದೆ. ಬಿಬಿಎಂಪಿ ಹೊರತು ಪಡಿಸಿ ಸ್ಥಳೀಯ ಸಂಸ್ಥೆ ಗಳಲ್ಲಿ ಚಾಲನೆಯಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಈ ವ್ಯವಸ್ಥೆ ಮಾಡಲಾಗಿದೆ.
ಸಿಎಂ ಅನುಮತಿ ಪಡೆದು ಯೋಜನೆ ಘೋಷಣೆ ಮಾಡಿದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್, ಯಾರೂ ಹಸಿವಿನಿಂದ ಬಳಲಬಾರದೆಂದು ಈ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ ಎಂದಿದ್ದಾರೆ.

