ಬಿಜೆಪಿಯ ನೀಚತನ ಬಹಿರಂಗವಾಗಿದೆ; ಮರೆಮಾಚಲು ಬಿಜೆಪಿಗರು ಹರಸಾಹಸ ಪಡುತ್ತಿದ್ದಾರೆ: ಕಾಂಗ್ರೆಸ್‌

ಕೊರೊನಾ ಹಾವಳಿ ಹೆಚ್ಚಾಗಿರುವ ಸಂದರ್ಭದಲ್ಲಿ ಬಿಜೆಪಿಯ ನೀಚತನ ಅನಾವರಣಗೊಳ್ಳುತ್ತಿದೆ. ತಮ್ಮ ಅಯೋಗ್ಯತನವನ್ನು ಮರೆಮಾಚಲು ಬಿಜೆಪಿಗರು ಹರಸಾಹಸ ಪಡುತ್ತಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್‌ ಹೇಳಿದೆ.

ಈ ಬಗ್ಗೆ ಕರ್ನಾಟಕ ಕಾಂಗ್ರೆಸ್‌ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಟ್ವೀಟ್‌ ಮಾಡಿದ್ದು, ‘ಕುಣಿಲಾರದವನು ನೆಲನೇ ಡೊಂಕು’ ಎಂದಂತೆ ಜನಪರ ಚಿಂತನೆ ಇಲ್ಲದ ಅಸಮರ್ಥ ಬಿಜೆಪಿ ಸರ್ಕಾರಕ್ಕೆ ಪ್ರತಿಯೊಂದು ವಿಷಯದಲ್ಲೂ ಹೈಕೋರ್ಟ್ ಮಾನಿಟರ್ ಮಾಡಬೇಕಾದ ಸ್ಥಿತಿ ಬಂದಿದ್ದು ದುರ್ದೈವ. ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸುತ್ತಿದೆ, ರಾಜ್ಯದಲ್ಲಿ ಹೈಕೋರ್ಟ್ ಚಾಟಿ ಬೀಸುತ್ತಿದೆ. ಕೊರೊನಾ ಹೊತ್ತಲ್ಲಿ ಬಿಜೆಪಿಯ ನೀಚತನ ಅನಾವರಣಗೊಳ್ಳುತ್ತಿದೆ ಎಂದು ಹೇಳಿದೆ.

ಮತ್ತೊಂದು ಟ್ವೀಟ್‌ನಲ್ಲಿ ಡಿ.ವಿ. ಸದಾನಂದಗೌಡ ಹಾಗೂ ಸಿ.ಟಿ. ರವಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದೆ. ತಮ್ಮ ಅಯೋಗ್ಯತನ ಮರೆಮಾಚಲು ಎಷ್ಟೆಲ್ಲ ಹರಸಾಹಸಪಡುತ್ತಿದ್ದಾರೆ ಬಿಜೆಪಿಗರು. ಜನರ ಪರವಾಗಿ ಮಾತನಾಡುತ್ತಿದ್ದ ವಿರೋಧಪಕ್ಷದ ನಾಯಕರ ಬಗ್ಗೆ ಮುಗಿಬಿಳುತ್ತಿದ್ದವರು ಈಗ ನ್ಯಾಯಾಧೀಶರ ವಿರುದ್ಧವೇ ಮಾತಾಡುತ್ತಿದ್ದಾರೆ. ‘ವಿನಾಶ ಕಾಲೇ ವಿಪರೀತ ಬುದ್ದಿ’! ಎಂದು ತಿರುಗೇಟು ನೀಡಿದೆ.

ಇದನ್ನೂ ಓದಿ: ರಸಗೊಬ್ಬರ ಬೆಲೆ ಹೆಚ್ಚಳ: ಶೇ.70 ರಷ್ಟು ರೈತರ ಭೂಮಿ ಕಸಿದುಕೊಳ್ಳುವ ಸರ್ಕಾರದ ಹುನ್ನಾರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights