ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದತಿಯ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು!

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದತಿಯ ಬಗ್ಗೆ ಕೆಲ ಮಾದ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಊಹಾಪೋಹಗಳಿಗೆ ಶಿಕ್ಷ ಸಚಿವ ಎಸ್ ಸುರೇಶ್ ಕುಮಾರ್ ತೆರೆ ಎಳೆದಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಗುಗಡೆ ಮಾಡಿರುವ ಅವರು, ಕೋವಿಡ್ ತೀವ್ರ ಪ್ರಸರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.

ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ ಎಂದಿರುವ ಸಚಿವರು ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ವಿಚಲಿತರಾಗದೇ ವಿದ್ಯಾರ್ಥಿಗಳು ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights