ನಾಳೆಯಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಿದ್ದರಾಮಯ್ಯ ವಿಡಿಯೋ ಸಂವಾದ..!

ಕೊರೊನಾ ಸ್ಥಿತಿ ಗತಿಗಳ ಬಗ್ಗೆ ತಿಳಿಯಲು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಡಿಯೋ ಸಂವಾದ ನಡೆಸಲು ಮುಂದಾಗಿದ್ದಾರೆ.

ಈ ಬಗ್ಗೆ ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲಾಕ್ಡೌನ್ ಬೆನ್ನಲ್ಲೇ ನಗರ ಬಿಟ್ಟು ಹಳ್ಳಿಗಳಿಗೆ ತೆರಳಿದವರಿಂದ ಹಳ್ಳಿಗಳಿಗೆ ಸೋಂಕು ತೀವ್ರ ಪ್ರಮಾಣದಲ್ಲಿ ಹರಡಿದೆ. ಈ ಹಿನ್ನೆಯಲ್ಲಿ ಕೊರೊನಾ ನಿಯಂತ್ರಣ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡಲು ಮಾಡಿಕೊಂಡಿರುವ ವ್ಯವಸ್ಥೆಗಳ ಬಗ್ಗೆ ಶುಕ್ರವಾರದಿಂದ ಪ್ರತಿಯೊಂದು ಜಿಲ್ಲಾಧಿಕಾರಿಗಳಿಂದ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ.

ಶುಕ್ರವಾರದಿಂದ ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿ ಜೊತೆಗೆ ತಲಾ 1 ಗಂಟೆ ಸಮಾಲೋಚನೆ ನಡೆಸಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊರೊನಾ ನಿಯಂತ್ರಣದಲ್ಲಿ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ನೀಡುರುವ ಹಿನ್ನೆಲಯಲ್ಲಿ ಸಿದ್ಧರಾಮಯ್ಯ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿರೋಧಪಕ್ಷದ ನಾಯಕರು ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿರುವುದು ಚರ್ಚೆಗೆ ಕಾರಣವಾಗಿದ್ದು, ಸಿದ್ದರಾಮಯ್ಯ ಅವರು ಅಧಿಕೃತವಾಗಿ ಜಿಲ್ಲಾಧಿಕಾರಿಗಳ ಸಭೆ ಕರೆಯಲು ಅವಕಾಶವಿಲ್ಲ.

ಆದರೆ ‘ಶ್ಯಾಡೋ ಸಿಎಂ’ ಆಗಿ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆಯಬಹುದು. ಆದರೆ ಈ ವೇಳೆ ಯಾವುದೇ ಕ್ರಮಗಳಿಗೆ ಜಿಲ್ಲಾಧಿಕಾರಿಗಳಿಗೆ ಆದೇಶ, ನಿರ್ದೇಶನ ನೀಡುವಂತಿಲ್ಲ. ಬದಲಿಗೆ ಮಾಹಿತಿ ಆಧರಿಸಿ ಸರ್ಕಾರ ಅಥವಾ ಸಚಿವರಿಗೆ ಕ್ರಮಕ್ಕೆ ಒತ್ತಾಯಿಸಬಹುದು ಎಂದು ಸರ್ಕಾರದ ಮೂಲಗಳು ಸ್ಪಷ್ಟಪಡಿಸಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights