ನೀನು ಪವರ್‌ಫುಲ್ ಸಂಸದ, ತಾಕತ್ತಿದ್ರೆ ರೋಹಿಣಿ ಸಿಂಧೂರಿಯನ್ನು ವರ್ಗಾವಣೆ ಮಾಡಿಸು; ಪ್ರತಾಪ್ ಸಿಂಹಗೆ ಜಿಟಿಡಿ ಸವಾಲು
ನೀನು ಪವರ್‌ಫುಲ್ ಸಂಸದ. ನೀನು ಹೇಳಿದಂತೆ ಪಿಎಂ ಮತ್ತು ಸಿಎಂ ಕೇಳ್ತಾರೆ. ತಾಕತ್ತಿದ್ದರೆ ಮೈಸೂರು ಜಿಲ್ಲಾಧಿಕಾರಿಯನ್ನ ವರ್ಗಾವಣೆ ಮಾಡಿಸು ಎಂದು ಸಂಸದ ಪ್ರತಾಪ್ ಸಿಂಹಗೆ ಶಾಸಕ ಜಿ.ಟಿ.ದೇವೇಗೌಡ ಸವಾಲು ಹಾಕಿದ್ದಾರೆ.
ಪ್ರತಾಪ್ ಸಿಂಹ ವಿರುದ್ದ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿರುವ ಜಿಟಿಡಿ, “ಸುಖಾಸುಮ್ಮನೆ ಹಾದಿಬೀದಿಲಿ ನಿಂತು ಮಾತನಾಡುವುದರಿಂದ ಉಪಯೋಗ. ದಿನ ಬೆಳಗಾದರೆ ರೋಹಿಣಿ ಸಿಂಧೂರಿ ವಿರುದ್ಧ ಪತ್ರಿಕೆಗೆ ಸ್ಟೇಟ್‌ಮೆಂಟ್ ಕೊಟ್ಟ ಮಾತ್ರಕ್ಕೆ ನೀನು ಹುಲಿ ಆಗಲ್ಲ. ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡ” ಎಂದು ಕಿಡಿಕಾರಿದ್ದಾರೆ.
ವೈಫಲ್ಯತೆ ಬಗ್ಗೆ ಮಾತನಾಡಬೇಕಿರುವುದು ವಿರೋಧ ಪಕ್ಷದವರು, ಆಡಳಿತ ಪಕ್ಷದವರಲ್ಲ. ನೀನು ಪವರ್‌ಫುಲ್ ಸಂಸದ. ನೀನು ಹೇಳಿದಂತೆ ಪಿಎಂ ಮತ್ತು ಸಿಎಂ ಕೇಳ್ತಾರೆ ಎಂದು ಬೊಬ್ಬೆಹೊಡೆಯುತ್ತೀಯಾ. ತಾಕತ್ತಿದ್ದರೆ ಜಿಲ್ಲಾಧಿಕಾರಿಯನ್ನ ವರ್ಗಾವಣೆ ಮಾಡಿ ತೋರಿಸು ಎಂದು ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದಾರೆ.
ಸಾ.ರಾ.ಮಹೇಶ್ ಮಾತ್ರ ಮೈಸೂರು ಜಿಲ್ಲೆಯಲ್ಲಿ ಕೆಲಸ ಮಾಡ್ತಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಜಿಲ್ಲೆಯ ಶಾಸಕರು ನಿನಗಿಂತ ಹೆಚ್ಚು ಕೆಲಸ ಮಾಡ್ತಿದ್ದಾರೆ. ಸ್ವಂತ ಹಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಸಂಸದರಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯಾ ಹೇಳು? ಎಂದು ಪ್ರಶ್ನಿಸಿದ್ದಾರೆ.
ನೀನು ಮಾಡುವ ಆರೋಪಗಳ ಹಿಂದೆ ವೈಯಕ್ತಿಕ ಸಮಸ್ಯೆ ಇದೆ. ನಿಮ್ಮ ಹೇಳಿಕೆಗಳು ಜನರಲ್ಲಿ ಅನುಮಾನ ಸೃಷ್ಟಿಸಿವೆ. ಒಬ್ಬ ಮಾತ್ರ ಹೀರೋ, ನಾವೆಲ್ಲಾ ಝೀರೋನಾ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ: ಯೋಗೇಶ್ವರ್ ಬಂಧನಕ್ಕೆ ರೇಣುಕಾಚಾರ್ಯ ಆಗ್ರಹ!

