ಹೈಕಮಾಂಡ್‌ ಸೂಚಿಸಿದ ತಕ್ಷಣವೇ ರಾಜೀನಾಮೆ ನೀಡುತ್ತೇನೆ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಪದೇ ಪದೇ ಚರ್ಚೆಗೆ ಗ್ರಾಸವಾಗುತ್ತಿದೆ. ಸಿಎಂ ಸ್ಥಾನದಿಂದ ಯಡಿಯೂರಪ್ಪರನ್ನು ಕೆಳಗಿಸಿ, ಮತ್ತೊಬ್ಬರನ್ನು ಸಿಎಂ ಗಾದಿಗೇರಿಸುವ ಸಾಧ್ಯತೆಯ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಈ ಬಗ್ಗೆ ಖಡಕ್‌ಕಾಗಿ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ಹೈಕಮಾಂಡ್‌ ಸೂಚಿಸಿದರೆ, ಆ ತಕ್ಷಣವೇ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ನನಗೆ ಸೂಚಿಸಿದರೆ ರಾಜೀನಾಮೆ ನೀಡುವಂತೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಈ ಹಿಂದೆಯೂ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಆರ್‌ಎಸ್‌ಎಸ್‌ ಹಿನ್ನೆಲೆ ಇರುವವರನ್ನು ಸಿಎಂ ಮಾಡಲು ಬಿಜೆಪಿ ಮುಂದಾಗಿದೆ ಎಂದು ಹೇಳಲಾಗಿತ್ತು. ಅದಕ್ಕಾಗಿ ರಾಜ್ಯ ಸರ್ಕಾರ ಕೆಲಸಗಳಲ್ಲಿ ರಾಜ್ಯಪಾಲರನ್ನು ಮಧ್ಯ ಪ್ರವೇಶಿಸಿ, ಸಭೆಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೀಗ ಮತ್ತೆ ಸಿಎಂ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದ್ದು, ಯಡಿಯೂರಪ್ಪ ಅವರ ಸಿಎಂ ಖುರ್ಚಿ ಮತ್ತೆ ಅಲುಗಾಡುತ್ತಿದೆ ಎಂದು ಹೇಳಲಾಗಿದೆ.

ಅಲ್ಲದೆ, ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫಲಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ ಪೊಲಿಟಿಕಲ್‌ ಸರ್ಜರಿ ಮಾಡಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಬಿಜೆಪಿ ಚಿಂತಿಸಿದೆ. ಅಲ್ಲದೆ, ರಾಜ್ಯದ ಸಿಎಂ ಯಡಿಯೂರಪ್ಪ ಅವರನ್ನೂ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ, ಬೇರೊಬ್ಬರನ್ನು ಸಿಎಂ ಮಾಡಲು ಮುಂದಾಗಿದ್ದು, ಇದಕ್ಕಾಗಿ ಯಾರು ಸೂಕ್ತ ಎಂದು ಹುಡುಕಾಟ ಆರಂಭಿಸಿದೆ ಎಂದು ಚರ್ಚೆಯಾಗುತ್ತಿದೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ ವೈಫಲ್ಯ: ಮೋದಿ ವರ್ಚಸ್ಸು ಉಳಿಸಲು ಕೇಂದ್ರ ಸಚಿವ ಹರ್ಷವಧನ್‌, ಸಿಎಂ ಬಿಎಸ್‌ವೈ ತಲೆದಂಡ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights