ಸಿಡಿಲು ಬಡಿದು 20 ಮಂದಿ ದಾರುಣ ಸಾವು; ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ!

ಸೋಮವಾರ ಪಶ್ಚಿಮ ಬಂಗಾಳದಲ್ಲಿ ಸಿಡಿಲು ಬಡಿದು 20 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಕುಟುಂಬಗಳಿಂದ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಬಂಗಾಳ ಸರ್ಕಾರ ಘೋಷಿಸಿದೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್​, ಹೂಗ್ಲಿ, ಪುರ್ಬಾ ಮೆದಿನಿಪುರ ಸೇರಿ ಮೂರು ಜಿಲ್ಲೆಗಳಲ್ಲಿ ಸೋಮವಾರ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ.

ಮುರ್ಷಿದಾಬಾದ್​ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ತಲಾ 9 ಜನರು ಸಿಡಿಲಿಗೆ ಬಲಿಯಾದರೆ, ಪುರ್ಬಾ ಮೆದಿನಿಪುರ ಜಿಲ್ಲೆಯಲ್ಲಿ ಇಬ್ಬರು ಸತ್ತಿದ್ದಾರೆ.ಮುರ್ಷಿದಾಬಾದ್​ನಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಡಿಲು ಬಡಿದು ಮೃತಪಟ್ಟವರ ಕುಟಂಬಸ್ಥರಿಗೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ, ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದೆ.

ಇದನ್ನೂ ಓದಿ: ಹೂಚ್ ದುರಂತದ ಕಿಂಗ್‌ಪಿನ್ ಬಿಜೆಪಿ ಮುಖಂಡ; ರಿಷಿ ಶರ್ಮಾ ಬಂಧನ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights