ಕೃಷಿ ಕಾಯ್ದೆ ವಿರುದ್ದದ ಪ್ರತಿಭಟನೆಯಲ್ಲಿ 500 ರೈತರ ಸಾವು; ಕುಗ್ಗದ ರೈತರು: ರಾಹುಲ್‌ಗಾಂಧಿ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ದ ಕಳೆದ ಏಳು ತಿಂಗಳಿಂದ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಸುಮಾರು 500 ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ, ರೈತರ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಧೋರಣೆಯನ್ನು ತಾಳಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ರೈತರು ತಮ್ಮ ಜಮೀನುಗಳ ರಕ್ಷಣೆಗಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 500 ಮಂದಿಯ ಪ್ರಾಣ ತ್ಯಾಗವಾಗಿದೆ. ಆದರೂ ರೈತರು ಹೆದರಿಲ್ಲ ಈಗಲೂ ಪ್ರತಿಭಟನೆ ಮುಂದುವರೆಸಿದ್ದಾರೆ. ರೈತರ ಹೋರಾಟ ಸತ್ಯದಿಂದ ಕೂಡಿದೆ ಎಂದು ಹೇಳಿದ್ದಾರೆ.

ಕೊರೊನಾ, ಚಳಿಗಾಲ, ಮಳೆಗಾಲ, ಬೇಸಿಗೆ ಕಾಲ ಯಾವುದಕ್ಕೂ ರೈತರು ಜಗ್ಗಿಲ್ಲ. ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ಬಿಜೆಪಿ ನೇತೃತ್ವದದ ಎನ್ ಡಿ ಎ ಸರ್ಕಾರದ ಅವಧಿ ಕೊನೆಗೊಳ್ಳುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ರೈತರು ಪಟ್ಟು ಹಿಡಿದಿದ್ದಾರೆ.

ಕೇಂದ್ರ ಸರ್ಕಾರ ಕೂಡ ಅಹಂಕಾರದ ಧೋರಣೆಯನ್ನು ಅನುಸರಿಸುತ್ತಿದೆ. ಆರಂಭದಲ್ಲಿ ಎಂಟು ಸುತ್ತಿನ ಮಾತುಕತೆ ನಡೆಸಲಾಯಿತು. ಜನವರಿ 26ರಂದು ಗಣರಾಜ್ಯೋತ್ಸವದ ದಿನ ರೈತರು ಟ್ರ್ಯಾಕ್ಟರ್ ರ್ಯಾಲಿ ಮೂಲಕ ದೆಹಲಿ ಚಲೋ ನಡೆಸಿದರು. ಇದು ಅಲ್ಲೋಲ್ಲಕಲ್ಲೋಲ ಪರಿಸ್ಥಿತಿ ನಿರ್ಮಿಸಿ ಕಾನೂನು ಸುವ್ಯವಸ್ಥೆಗೆ ಭಂಗ ತಂದಿತ್ತು. ಅನಂತರವೂ ಪ್ರತಿಭಟನೆ ಮುಂದುವರೆದಿದೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದ ಸಿಗಲಿದೆ ರಿಲೀಫ್‌?; ಮೂರು ಹಂತಗಳಲ್ಲಿ ಅನ್‌ಲಾಕ್‌ ಪ್ರಕ್ರಿಯೆಗೆ ಸಿದ್ಧತೆ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights