ನಿಮ್ಮ ಜೇಬು ತುಂಬಿದರೆ ಸಾಕೆ? ಬಡವರ ಸ್ಥಿತಿ ಏನಾಗಬೇಕು?; BJP ಸರ್ಕಾರದ ವಿರುದ್ದ ಡಿಕೆಶಿ ಆಕ್ರೋಶ

ಸರ್ಕಾರದ ಬೊಕ್ಕಸ ತುಂಬಿದರೆ ಸಾಕೇ..? ಬಡವರು, ಜನಸಾಮಾನ್ಯರು ಜೀವನ ನಡೆಸುವುದು ಹೇಗೆ? ಅವರ ಪರಿಸ್ಥಿತಿ ಏನಾಗಬೇಕು ಎಂದು ಇಂಧನ ಬೆಲೆ ಏರಿಕೆಯ ವಿರುದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾವಹಿಸಿದ್ದ ಅವರು, ಇಂಧನ ಬೆಲೆ ಏರಿಕೆ ವಿರುದ್ದ ರಾಜ್ಯದಲ್ಲಿ ಐದು ದಿನಗಳ ಕಾಲ ‘100 ನಾಟೌಟ್‌’ ಪ್ರತಿಭಟನೆಯನ್ನು ಕಾಂಗ್ರೆಸ್‌ ನಡೆಸುತ್ತಿದೆ. ನಿನ್ನೆ ರಾಜ್ಯ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಮಾಡಿದ್ದು, ಇಂದು ತಾಲೂಕು ಕೇಂದ್ರಗಳಲ್ಲಿ, ನಾಳೆ ಹೋಬಳಿ ಹಾಗೂ ಜಿಲ್ಲಾ ಪಂಚಾಯಿತಿ ಕೇಂದ್ರಗಳಲ್ಲಿ, ನಾಡಿದ್ದು ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ, ಉಳಿದ ಕೇಂದ್ರಗಳಲ್ಲಿ 15ರಂದು ಪ್ರತಿಭಟನೆ ಮಾಡುತ್ತೇವೆ ಎಂದು ಡಿಕೆಶಿ ಹೇಳಿದ್ದಾರೆ.

ಐದು ದಿನ ಐದು ಸಾವಿರ ಪೆಟ್ರೋಲ್ ಬಂಕ್ ಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಇದು ಒಬ್ಬರ ಕಾರ್ಯಕ್ರಮ ಅಲ್ಲ. ಕಾಂಗ್ರೆಸ್ ಕಾರ್ಯಕ್ರಮ ಅಲ್ಲ. ಇದು ಜನತಾದಳ, ಬಿಜೆಪಿ ಹಾಗೂ ಎಲ್ಲ ಜನರ ಕಾರ್ಯಕ್ರಮ.

ಬಿಜೆಪಿಯವರೇ ಕಲಿಸಿದ ಪಾಠವಿದು

ಬಿಜೆಪಿಯವರು ಈ ಹಿಂದೆ ಇದೇ ಕೆಲಸ ಮಾಡಿದ್ದರಲ್ಲ.., ಅವರು ಪ್ರತಿಭಟನೆ ಮಾಡಿದ್ದನ್ನು ನಾವು ಈಗ ಮುಂದುವರಿಸುತ್ತಿದ್ದೇವೆ. ಅವರು ಪೆಟ್ರೋಲ್ ಬೆಲೆ ₹52 ತಲುಪಿದಾಗ ದೊಡ್ಡ ಹೋರಾಟ ಮಾಡಿದ್ದರು. ಈಗ ₹100 ಆಗಿದೆ.

ಪೆಟ್ರೋಲ್ ಮೇಲೆ ₹62 ತೆರಿಗೆ ವಿಧಿಸಲಾಗಿದೆ. ಇದೊಂದೇ ವರ್ಷ ತಿಂಗಳಿಗೆ ಸರಾಸರಿ 18 ಬಾರಿಯಂತೆ ಬೆಲೆ ಹೆಚ್ಚಿಸಲಾಗಿದೆ. ಆ ಮೂಲಕ ಇಂಧನ ತೈಲ ಬೆಲೆಯಲ್ಲಿ ಶತಕ ಬಾರಿಸಿದೆ. ಇದಕ್ಕಾಗಿ ಹಲವೆಡೆ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಕೆಲವೆಡೆ ತಮಟೆ, ಜಾಗಟೆ ಹೊಡೆದು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರೇ ಇದನ್ನೆಲ್ಲ ನಮಗೆ ಹೇಳಿಕೊಟ್ಟರು.

ಇದನ್ನೂ ಓದಿ: ಪಂಜಾಬ್‌ ಕಾಂಗ್ರೆಸ್‌ನಲ್ಲೂ ಆಂತರಿಕ ಬಿಕ್ಕಟ್ಟು; ಅಮರಿಂದರ್‌ ಮತ್ತು ಸಿಧು ನಡುವೆ ನಾಯಕತ್ವದ ಕುಸ್ತಿ!

ಪೆಟ್ರೋಲ್ ಡೀಸೆಲ್ ಬೆಲೆ ಇಷ್ಟು ಬಾರಿ ಹೆಚ್ಚಳ ಮಾಡಿದ್ದೀರಲ್ಲಾ.., ರೈತರ ಬೆಂಬಲ ಬೆಲೆ ಎಷ್ಟು ಬಾರಿ ಹೆಚ್ಚಿಸಿದ್ದೀರಿ? ರೈತನ ಎಲ್ಲ ಬೆಳೆಯ ಬೆಲೆಯನ್ನು ಎಷ್ಟು ಬಾರಿ ಹೆಚ್ಚಿಸಿದ್ದೀರಿ? ದಿನಗೂಲಿ, ಖಾಸಗಿ ಕಾರ್ಮಿಕರು, ನೌಕರರು, ನರೇಗಾ ಕಾರ್ಮಿಕರ ವೇತನ ಎಷ್ಟು ಬಾರೀ ಹೆಚ್ಚಿಸಿದ್ದೀರಿ? ಎಂದು ಯಡಿಯೂರಪ್ಪ ಹಾಗೂ ಮೋದಿ ಅವರನ್ನು ಕೇಳಲು ಬಯಸುತ್ತೇನೆ.

ಎಲ್ಲ ಸೇರಿ ಸರಕಾರ ಕಿತ್ತೊಗೆಯಬೇಕು

ನಿಮ್ಮ ಜೇಬು ಮಾತ್ರ ತುಂಬಬೇಕಾ? ಬಡವರು ಏನು ಮಾಡಬೇಕು? ಇದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಬಿಜೆಪಿ, ದಳದವರು ಹಾಗೂ ಜನ ಸಾಮಾನ್ಯರು ಎಲ್ಲ ಸೇರಿ ಈ ಸರ್ಕಾರ ಕಿತ್ತೊಗೆಯಬೇಕು. ಹೀಗಾಗಿ ದೇಶದ ಉದ್ದಗಲಕ್ಕೂ ಈ ಪ್ರತಿಭಟನೆ ಮಾಡಲಾಗುತ್ತಿದೆ.

ನಮ್ಮ ಕಾರ್ಯಕ್ರಮವನ್ನು ನಮ್ಮ ನಾಯಕರು ಜೂಮ್ ಮೂಲಕ ಪರಿಶೀಲಿಸುತ್ತಿದ್ದಾರೆ. ಅವರಿಗೆ ಜವಾಬ್ದಾರಿ ನೀಡಿದ್ದೇವೆ. ಹೀಗೆ ಮುಂದಿನ ದಿನಗಳಲ್ಲೂ ಜನರ ಸಮಸ್ಯೆಗಳಿಗೆ ನಾವು ಧ್ವನಿಯಾಗುತ್ತೇವೆ. ಅದಕ್ಕೆ ಬೇಕಾದ ಕಾರ್ಯಕ್ರಮ ರೂಪಿಸುತ್ತೇವೆ.

ಇದನ್ನೂ ಓದಿ: RJD ನಾಯಕರನ್ನು ಭೇಟಿಯಾದ ಜಿತನ್‌ ಮಾಂಜಿ; BJP ನೇತೃತ್ವದ NDA ತೊರೆಯುತ್ತಾ HAM ಪಕ್ಷ?!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights