ಬೆಂಗಳೂರು ಸೇರಿ 20 ಜಿಲ್ಲೆಗಳು ಅನ್‌ಲಾಕ್‌; ಯಥಾಸ್ಥಿತಿಯ ಲಾಕ್‌ಡೌನ್‌ನಲ್ಲಿ 11 ಜಿಲ್ಲೆಗಳು!

ಕಳೆದ ಒಂದೂವರೆ ತಿಂಗಳುಗಳಿಂದ ಕರ್ನಾಟಕದಲ್ಲಿ ಜಾರಿಯಲ್ಲಿದ್ದ ಲಾಕ್‌ಡೌನ್‌ಗೆ 20 ಜಿಲ್ಲೆಗಳಲ್ಲಿ ಅಂತ್ಯ ಹಾಡಲು ಸರ್ಕಾರ ಮುಂದಾಗಿದೆ. ಸೋಮವಾರದಿಂದ (ಜೂನ್‌ 14) ಹಂತ ಹಂತವಾಗಿ ಬೆಂಗಳೂರು ಸೇರಿದಂತೆ 20 ಜಿಲ್ಲೆಗಳಲ್ಲಿ ಅನ್‌ಲಾಕ್‌ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಬೆಂಗಳೂರಿನಲ್ಲಿ ಮೊದಲಿನ ಸ್ಥಿತಿಗೆ ಮರಳಿದ್ದು, ಎಲ್ಲೆಡೆ ಬೆಳ್ಳಂಬೆಳಗ್ಗೆಯೇ ವಾಹನಗಳು ರಸ್ತೆಗಿಳಿದಿದ್ದು, ಟ್ರಾಫಿಕ್‌ ಜಾಮ್‌ ಆಗುತ್ತಿದೆ.

ಉಳಿದ 11 ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿರೀಕ್ಷೆಯಷ್ಟು ಕಡಿಮೆಯಾಗದ ಹಿನ್ನೆಲೆಯಲ್ಲಿ 11 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಮುಂದುವರೆಯಲಿದೆ.

“ಕೋವಿಡ್- 19 ತಾಂತ್ರಿಕ ಸಲಹಾ ಸಮಿತಿ ನೀಡಿದ ಸಲಹೆಗಳ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಕಳೆದ ಗುರುವಾರ ಹೇಳಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದರೆ ಅದು ಮತ್ತಷ್ಟು ಅನ್‌ಲಾಕ್ ಘೋಷಿಸಲು ಸರ್ಕಾರಕ್ಕೆ ಅನುಕೂಲವಾಗುತ್ತದೆ ಮತ್ತು ಈ ನಿಟ್ಟಿನಲ್ಲಿ ಜನರ ಸಹಕಾರವನ್ನು ಕೋರುತ್ತಿದ್ದೇನೆ” ಎಂದು ಹೇಳಿದ್ದರು.

ಕರ್ನಾಟಕ ಸರ್ಕಾರ ಏಪ್ರಿಲ್ 27 ರಿಂದ 14 ದಿನಗಳ ಲಾಕ್‌ಡೌನ್ ಘೋಷಿಸಿತ್ತು ಮತ್ತು ನಂತರ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಬಳಿಕ ಮೇ 10ರಿಂದ ಮೇ 24 ರವರೆಗೆ ಸಂಪೂರ್ಣ ಲಾಕ್‌ಡೌನ್ ವಿಧಿಸಿತು. ಲಾಕ್‌ಡೌನ್‌ನಿಂದ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದು ತಜ್ಞರು ಹೇಳಿದ್ದರಿಂದ ಇದನ್ನು ಜೂನ್ 7ರಿಂದ ಜೂನ್ 14ರವರೆಗೆ ವಿಸ್ತರಿಸಲಾಯಿತು.

ಈಗಿರುವ ಲಾಕ್‌ಡೌನ್ ನಿಯಮಗಳು ಚಿಕ್ಕಮಗಳೂರು, ದಾವಣಗೆರೆ, ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬೆಳಗಾವಿ ಮತ್ತು ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಪರೀಕ್ಷಾ ಸಕಾರಾತ್ಮಕ ದರ (ಟಿಪಿಆರ್) ಯೊಂದಿಗೆ ಮುಂದುವರಿಯುತ್ತದೆ. 11 ಜಿಲ್ಲೆಗಳ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಕಠಿಣ ಕ್ರಮಗಳನ್ನು ಜಾರಿಗೆ ತರಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಿದೆ.

ಇದನ್ನೂ ಓದಿ: ನಮ್ಮ ಫೋನ್‌ ಕರೆಗಳನ್ನು ಕದ್ದಾಲಿಸಲಾಗುತ್ತಿದೆ: ಕಾಂಗ್ರೆಸ್‌ ಶಾಸಕರ ಆರೋಪ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights