ಕಾನ್​ಸ್ಟೇಬಲ್‌​ ಪರೀಕ್ಷೆ ಬರೆದ ನಕಲಿ ಅಭ್ಯರ್ಥಿಗಳು; 61 ಮಂದಿ ಬಂಧನ; ಐವರು ಪೇದೆಗಳ ವಜಾ!

2020ರ ನವೆಂಬರ್​ನಲ್ಲಿ ನಡೆದ ಕಾನ್​ಸ್ಟೇಬಲ್‌​ ಪರೀಕ್ಷೆಯಲ್ಲಿ ಪರೀಕ್ಷಾ ಅಭ್ಯರ್ಥಿಗಳ ಪರವಾಗಿ ಹಲವಾರು ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 61 ಮಂದಿ ನಕಲಿ ಅಭ್ಯರ್ಥಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ,  ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಕಾನ್​ಸ್ಟೇಬಲ್‌​ಗಳನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಕಳದ ವರ್ಷದ ಕಾನ್ಸ್‌ಸ್ಟಬಲ್‌ ಹುದ್ದೆಗೆ ಕರೆಯಲಾಗಿತ್ತು. ಹಲವಾರು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಕೆಲವು ಅಭ್ಯರ್ಥಿಗಳ ಹೆಸರಿನಲ್ಲಿ ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆದಿರುವುದಾಗಿ ತಿಳಿದು ಬಂದಿತ್ತು. ಈ ಸಂಬಂಧ ಬೆಂಗಳೂರಿನಲ್ಲಿ 11 ಪ್ರಕರಣ, ಬೆಳಗಾವಿಯಲ್ಲಿ 5 ಪ್ರಕರಣ ಸೇರಿದಂತೆ ಒಟ್ಟು 21 ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ಗೆ ವರ್ಗಾಹಿಸಿತ್ತು. ತನಿಖೆ ನಡೆಸಿರುವ ಸಿಐಡಿ ಪೊಲೀಸರು 61 ಆರೋಪಿಗಳನ್ನು ಬಂಧಿಸಿದ್ದಾರೆ. ಅಭ್ಯರ್ಥಿಗಳ ಹೆಸರಿನಲ್ಲಿ ಪರೀಕ್ಷೆ ಬರೆದಿದ್ದ ಐವರು ಕಾನ್​ಸ್ಟೇಬಲ್​ಗಳನ್ನು ರಾಜ್ಯ ಸರ್ಕಾರ ಕೆಲಸದಿಂದ ವಜಾ ಮಾಡಿದೆ. 21 ಅಭ್ಯರ್ಥಿಗಳನ್ನು ಶಾಶ್ವತವಾಗಿ ಯಾವುದೇ‌ ಪರೀಕ್ಷೆ ಬರೆಯದಂತೆ ಡಿಬಾರ್ ಮಾಡಲಾಗಿದೆ.

ಬಂಧಿತ ಆರೋಪಿಗಳು ಅಸಲಿ ಅಭ್ಯರ್ಥಿಯ ಆಧಾರ್ ಕಾರ್ಡ್​ನಲ್ಲಿ ನಕಲಿ ಅಭ್ಯರ್ಥಿಗಳ ಪೋಟೋ ಬದಲಾಯಿಸುತ್ತಿದ್ದರು. ಗೋಕಾಕ್​ನ ಪೋಟೋ ಸ್ಟುಡಿಯೋವೊಂದರಲ್ಲಿ ಈ ಕೆಲಸ ಮಾಡಲಾಗುತ್ತಿತ್ತು. ಅಲ್ಲಿ ಪರೀಕ್ಷೆಯ ನಕಲಿ ದಾಖಲೆ ಸೃಷ್ಟಿಸಿರೋದು ಪತ್ತೆಯಾಗಿದೆ ಎನ್ನಲಾಗಿದೆ. ಬಂಧಿತರಿಂದ 1.54 ಲಕ್ಷ ರೂಪಾಯಿ ನಗದು, ಎರಡು ಕಾರು, ಹಾರ್ಡ್ ಡಿಸ್ಕ್ ಮತ್ತು ಮೊಬೈಲ್ ಪೋನ್​ಗಳನ್ನು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಹಸುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದನೆಂದು ವ್ಯಕ್ತಿಯನ್ನು ಥಳಿಸಿ ಕೊಂದ ಜನರು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights