ಪಂಜಾಬ್ ಸಿಎಂ ಮನೆ ಮುಂದೆ ಪ್ರತಿಭಟನೆ: ಅಕಾಲಿ ದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಂಧನ!

ಪಂಜಾಬ್‌ ಸರ್ಕಾರದ ವಿರುದ್ಧದ ಸಿಎಂ ಅಮರಿಂದರ್ ಸಿಂಗ್‌ ಅವರ ನಿವಾಸದ ಎದುರು ಶಿರೋಮಣಿ ಅಕಾಲಿ ದಳ(ಎಸ್‌ಎಡಿ)ದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಎಸ್‌ಎಡಿ ಪಕ್ಷದ ಅಧ್ಯಕ್ಷ ಸುಖಬೀರ್‌ ಸಿಂಗ್‌ ಬಾದಲ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೋವಿಡ್‌-19 ರೋಗಿಗಳಿಗೆ ನೀಡುವ ವೈದ್ಯಕೀಯ ಕಿಟ್‌ ಸಂಗ್ರಹ ಮತ್ತು ಲಸಿಕೆ ಮಾರಾಟದಲ್ಲಿ ಅವ್ಯವಹಾರ ನಡೆದಿದೆ ಎಂದು ಅಕಾಲಿ ದಳ ಆರೋಪಿಸಿದೆ. ಹೀಗಾಗಿ, ಪಂಜಾಬ್‌ನ ಆರೋಗ್ಯ ಸಚಿವ ಬಲ್ಬೀರ್‌ ಸಿಂಗ್‌ ಸಿಧು ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಪಕ್ಷ ಒತ್ತಾಯಿಸಿ ಚಂಡೀಗಢದಲ್ಲಿರುವ ಸಿಎಂ ಮನೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಬಿರುಗಾಳಿ ಎದ್ದರೆ, ತನ್ನೆಲ್ಲ ಪಡೆಯ ಬಲವನ್ನು ಬಳಸಿದರೂ ಅದನ್ನು ಕ್ಯಾಪ್ಟನ್‌ ತಡೆಯಲು ಸಾಧ್ಯವಾಗುವುದಿಲ್ಲ. ಲಸಿಕೆಯಲ್ಲಿ ಹಗರಣವಾಗಿದೆ. ಫತೇಹ್‌ ಕಿಟ್‌ನಲ್ಲಿ (ವೈದ್ಯಕೀಯ ಕಿಟ್) ಹಗರಣ, ಎಸ್ಸಿ ವಿದ್ಯಾರ್ಥಿ ವೇತನದಲ್ಲಿ ಹಗರಣ, ರೈತರ ಭೂಮಿಯನ್ನು ಅತಿಕ್ರಮಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಸುಖಬೀರ್‌ ಸಿಂಗ್‌ ಒತ್ತಾಯಿಸಿದ್ದಾರೆ.

ಮುಂದಿನ ವರ್ಷ ಪಂಜಾಬ್‌ ವಿಧಾನಸಭೆಗೆ ನಡೆಯಲಿರುವ ಚುನಾವಣೆಗಾಗಿ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮೈತ್ರಿ ಮಾಡಿಕೊಂಡಿವೆ. ವಿಧಾನಸಭೆಯ 117 ಸ್ಥಾನಗಳ ಪೈಕಿ ಮಾಯಾವತಿ ನೇತೃತ್ವದ ಬಿಎಸ್‌ಪಿ 20 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಸುಖ್‌ಬೀರ್‌ ಸಿಂಗ್‌ ಈ ಮೊದಲೇ ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕ ಸುವೇಂದು ಅಧಿಕಾರಿಗೆ ಲೀಗಲ್‌ ನೋಟಿಸ್‌ ನೀಡಿದ ಟಿಎಂಸಿ ಮಾಜಿ ನಾಯಕ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights