ಮನಿ ಲಾಂಡರಿಂಗ್ ಪ್ರಕರಣ: ಮಾಜಿ ಶಾಸಕರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ!

ಪನ್ವೆಲ್ ಮೂಲದ ಸಹಕಾರಿ ಬ್ಯಾಂಕಿನಲ್ಲಿ 512 ಕೋಟಿ ರೂ.ಗಳ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಶಾಸಕ ವಿವೇಕಾನಂದ್ ಎಸ್ ಪಾಟೀಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಪಾಟೀಲ್ (66) ಅವರನ್ನು ಕೇಂದ್ರ ತನಿಖಾ ಸಂಸ್ಥೆ ಮಂಗಳವಾರ ರಾತ್ರಿ 8: 15 ರ ಸುಮಾರಿಗೆ ಮುಂಬೈನಲ್ಲಿರುವ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದ ಇಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ನಂತರ ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಪಾಟೀಲ್ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್‌ಎ) ಹಲವು ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದ್ದು, ಹೆಚ್ಚಿನ ಕಸ್ಟಡಿಗಾಗಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ನವೀ ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ)ವು ಪಾಟೀಲ್‌ ಮತ್ತು 75 ಜನರ ವಿರುದ್ದ ಕಳೆದ ವರ್ಷ ಫೆಬ್ರವರಿಯಲ್ಲಿ  ಮನಿ ಲಾಂಡರಿಂಗ್ ಪ್ರಕರಣವನ್ನು ಇಡಿ ದಾಖಲಿಸಿದೆ.

ಈ ಹಿಂದೆ ಪನ್ವೆಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಸಹಕಾರಿ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಪಾಟೀಲ್, ಉಪಾಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಂಸ್ಥೆಯಿಂದ ಸಾಲ ಪಡೆದ ಹಲವಾರು ಮಂದಿಯನ್ನು ಆರೋಪಿಗಳೆಂದು ಪೊಲೀಸರು ಹೆಸರಿಸಿದ್ದರು.

ಬ್ಯಾಂಕಿನ ಕಾರ್ಯಾಚರಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಪರಿಶೀಲಿಸಿದ ನಂತರ ಈ ಅಕ್ರಮಗಳು ಬಹಿರಂಗಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ದ ಕ್ರಿಮಿನಲ್ ನಂಬಿಕೆ ಉಲ್ಲಂಘನೆ, ಭಾರತೀಯ ದಂಡ ಸಂಹಿತೆ, ಸಹಕಾರಿ ಸಂಘಗಳ ಕಾಯ್ದೆ ಮತ್ತು ಮಹಾರಾಷ್ಟ್ರ ಪ್ರೊಟೆಕ್ಷನ್ ಆಫ್ ಇಂಟರೆಸ್ಟ್ ಆಫ್ ಡೆಪಾಸಿಟರ್ಸ್‌ ಕಾಯ್ದೆಯಡಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ವಿವೇಕಾನಂದ್ ಪಾಟೀಲ್ ಅವರು ಆರ್‌ಬಿಐನಿಂದ ಪರವಾನಗಿ ಪಡೆದ ನಂತರ 1996 ರಲ್ಲಿ ಸಹಕಾರಿ ಬ್ಯಾಂಕ್ ಕಾಯ್ದೆಯಡಿ ಬ್ಯಾಂಕ್ ಸ್ಥಾಪನೆ ಮಾಡಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಡೋಸ್‌ಗಳ ಅಂತರ ಹೆಚ್ಚಿಸಲು ತಜ್ಞರು ಹೇಳಿಲ್ಲ; ಸುಳ್ಳು ಹೇಳಿದೆ ಕೇಂದ್ರ ಸರ್ಕಾರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights