ರಾಜ್ಯಕ್ಕೂ ಬಂತು ಡೆಲ್ಟಾ ಪ್ಲಸ್‌; ಮೈಸೂರಿನ ರೋಗಿಯಲ್ಲಿ ರೂಪಾಂತರಿ ವೈರಸ್‌ ಪತ್ತೆ!

ದೇಶವು ಕೊರೊನಾ 2ನೇ ಅಲೆಗೆ ತುತ್ತಾಗಿ, ಈಗಷ್ಟೇ ಸುಧಾರಿಸಿಕೊಳ್ಳುತ್ತಿದೆ. ಈ ನಡುವೆ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ ಕಾಣಿಸಿಕೊಂಡಿದ್ದು, ದೇಶದಲ್ಲಿ ಇದೂವರೆಗೂ 42 ಜನರಲ್ಲಿ ಈ ವೈರಸ್‌ ಪತ್ತೆಯಗಿದೆ ಎಂದು ತಿಳಿದು ಬಂದಿವೆ. ಇದೀಗ ಕರ್ನಾಟಕದಲ್ಲಿಯೂ ರೂಪಾಂತರಿ ವೈರಸ್‌ ಕಾಣಿಸಿಕೊಂಡಿದ್ದು, ಮೈಸೂರಿನ ರೋಗಿಯೊಬ್ಬರು ಡೆಲ್ಟಾ ಪ್ಲಸ್‌ ವೈರಸ್‌ಗೆ ತುತ್ತಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

“ಮೈಸೂರಿನಲ್ಲಿ ಒಂದು ಡೆಲ್ಟಾ ಪ್ಲಸ್‌ ಕೇಸ್ ಪತ್ತೆಯಾಗಿದೆ. ಆ ರೋಗಿಯನ್ನ ಐಸೋಲೇಟ್ ಮಾಡಲಾಗಿದೆ. ಯಾವುದೇ ರೋಗ ಲಕ್ಷಣ ರೋಗಿಗೆ ಇಲ್ಲ. ಆತನ ಪ್ರಾಥಮಿಕ ಮತ್ತು ದ್ವೀತಿಯ ಸಂಪರ್ಕದಲ್ಲಿ ಇರೋರಿಗೆ ಸೋಂಕು ಹರಡಿಲ್ಲ. ಡೆಲ್ಟಾ ಪ್ಲಸ್ ಕೇಸ್ ಬಗ್ಗೆ ಸೂಕ್ಷ್ಮವಾಗಿ ಗಮನ ಹರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಜಿನೋಮ್ ಲ್ಯಾಬ್ ಗಳನ್ನು ಕೂಡಾ ಸೆಟಪ್ ಮಾಡಲಾಗುತ್ತಿದೆ. 6 ಲ್ಯಾಬ್ ಕರ್ನಾಟಕದಲ್ಲಿ ಮಾಡಲು ನಿರ್ಧಾರ ಮಾಡಿದ್ದೇವೆ. ಡೆಲ್ಟಾ ಪ್ಲಸ್ ಬಗ್ಗೆ ನಿರಂತರವಾಗಿ ಗಮನಹರಿಸಲಾಗುತ್ತಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಡೆಲ್ಟಾ ಪ್ಲಸ್ ರೂಪಾಂತರ ಕಂಡುಬರುವ ಜಿಲ್ಲೆಗಳು ಮತ್ತು ಕ್ಲಸ್ಟರ್‌ಗಳಲ್ಲಿ ತಕ್ಷಣದ ನಿಯಂತ್ರಣ ಕ್ರಮಗಳು, ವರ್ಧಿತ ಪರೀಕ್ಷೆ, ಟ್ರ್ಯಾಕಿಂಗ್ ಮತ್ತು ವ್ಯಾಕ್ಸಿನೇಷನ್ ತೆಗೆದುಕೊಳ್ಳುವಂತೆ ಕೇಂದ್ರವು ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಅಲ್ಲದೆ, ಸೋಂಕಿತ ವ್ಯಕ್ತಿಗಳ ಮಾದರಿಗಳನ್ನು ತಕ್ಷಣವೇ INSACOG ನ ಗೊತ್ತುಪಡಿಸಿದ ಪ್ರಯೋಗಾಲಯಗಳಿಗೆ ಕಳುಹಿಸಲಾಗುವುದು. ಇದರಿಂದ ಕ್ಲಿನಿಕಲ್ ಸಾಂಕ್ರಾಮಿಕ ರೋಗ ಸಂಬಂಧಗಳನ್ನು ಮಾಡಬಹುದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 2ನೇ ಅಲೆ ಇಳಿಯುತ್ತಲೇ ಮತ್ತೊಂದು ಶಾಕಿಂಗ್‌ ನ್ಯೂಸ್‌; 40 ಜನರಲ್ಲಿ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ ಪತ್ತೆ!

“ಕೊರೊನಾ ವೈರಸ್​ನ ಜೀನೋಮ್ ಅನುಕ್ರಮವನ್ನು ನಡೆಸಲು INSACOG, ಅಥವಾ ಜೀನೋಮಿಕ್ಸ್‌ನ ಭಾರತೀಯ SARS-CoV-2 ಕನ್ಸೋರ್ಟಿಯಂ ಅನ್ನು ಸ್ಥಾಪಿಸಲಾಯಿತು. ಇನ್ಸಾಕೋಗ್ 28 ಪ್ರಯೋಗಾಲಯಗಳನ್ನು ಹೊಂದಿದೆ ಮತ್ತು ಅವುಗಳು 45,000 ಮಾದರಿಗಳನ್ನು ಅನುಕ್ರಮಗೊಳಿಸಿದೆ. ಅದರಲ್ಲಿ 22 ಪ್ರಕರಣಗಳು ಡೆಲ್ಟಾ ಪ್ಲಸ್ ರೂಪಾಂತರವನ್ನು ಕಂಡುಹಿಡಿದಿದೆ” ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

“INSACOG ನ ಪ್ರಯೋಗಾಲಯಗಳು ಈ ಮಾಹಿತಿಯನ್ನು ಆರೋಗ್ಯ ಸಚಿವಾಲಯದ ಗಮನಕ್ಕೆ ತರುತ್ತವೆ. ನಂತರ ಸಮಯೋಚಿತ ಮತ್ತು ತ್ವರಿತ ರೀತಿಯಲ್ಲಿ ಸಂಬಂಧಪಟ್ಟ ರಾಜ್ಯಗಳಿಗೆ ಹರಡುವಿಕೆಯನ್ನು ತಡೆಯಲು ಪ್ರಾರಂಭಿಸಬೇಕಾದ ಚಟುವಟಿಕೆಗಳು ಯಾವುವು ಎಂಬುದನ್ನು ಸೂಚಿಸುತ್ತದೆ. ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆಯನ್ನು ರೂಪಾಂತರಗಳಿಗೆ ಪ್ರಮಾಣೀಕರಿಸಲಾಗಿದೆ.

ಭಾರತ ಸೇರಿದಂತೆ ವಿಶ್ವದ 80 ದೇಶಗಳಲ್ಲಿ ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ ಪತ್ತೆಯಾಗಿದೆ. ಒಂಬತ್ತು ದೇಶಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ಪತ್ತೆಯಾಗಿದೆ. ಯುಎಸ್, ಯುಕೆ, ಪೋರ್ಚುಗಲ್, ಸ್ವಿಟ್ಜರ್ಲೆಂಡ್, ಜಪಾನ್, ಪೋಲೆಂಡ್, ನೇಪಾಳ, ಚೀನಾ ಮತ್ತು ರಷ್ಯಾ ದೇಶಗಳಲ್ಲಿ ಡೆಲ್ಟಾ ಪ್ಲಸ್ ಪತ್ತೆಯಾಗಿದ್ದು, ಇದು ಕಳವಳಕಾರಿ ಬೆಳವಣಿಗೆಯಾಗಿದೆ.

ಆದಾಗ್ಯೂ, ಭಾರತೀಯ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಎರಡೂ ಡೆಲ್ಟಾ ರೂಪಾಂತರದ ವಿರುದ್ಧ ಪರಿಣಾಮಕಾರಿಯಾಗಿವೆ. ಹೀಗಾಗಿ ಪ್ರತಿಯೊಬ್ಬರು ಶೀಘ್ರವಾಗಿ ಲಸಿಕೆ ಪಡೆಯುವುದು ಉತ್ತಮ” ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಯೋಗ ದಿನ 88 ಲಕ್ಷ ಡೋಸ್‌, ಮಂಗಳವಾರ 54 ಲಕ್ಷ -ಭಾನುವಾರ 69 ಸಾವಿರ; ಇದು ಮೋದಿ ಸರ್ಕಾರ ಬೂಟಾಟಿಕೆ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights