ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಫಾದರ್ ಸ್ಟಾನ್ ಸ್ವಾಮಿ ನಿಧನ!
ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ ಸ್ಟಾನ್ ಸ್ವಾಮಿ ಸೋಮವಾರ ನಿಧನರಾದರು ಎಂದು ಅವರ ವಕೀಲರು ಬಾಂಬೆ ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
ನ್ಯಾಯಾಲಯವು ತನ್ನ ಜಾಮೀನು ಅರ್ಜಿಯನ್ನು ಸೋಮವಾರ ಕೈಗೆತ್ತಿಕೊಳ್ಳುತ್ತಿದ್ದಂತೆ, ಸ್ಟಾನ್ ಸ್ವಾಮಿಯ ವಕೀಲರು ಅವರ ಸಾವಿನ ಸುದ್ದಿಯನ್ನು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಭಾನುವಾರ ತಡರಾತ್ರಿ 84 ವರ್ಷದ ಸ್ಟಾನ್ ಸ್ವಾಮಿ ಅವರ ವೈದ್ಯಕೀಯ ಸ್ಥಿತಿ ಹದಗೆಟ್ಟಿದೆ. ಹೀಗಾಘಿ ಬೆಳಿಗ್ಗೆ 4.30 ಕ್ಕೆ ಹೃದಯ ಸ್ತಂಭನದಿಂದಾಗಿ ನಿಧನರಾದರು ಎಂದು ವಕೀಲರು ತಿಳಿಸಿದ್ದಾರೆ.
ಮೇ 28 ರಂದು ಸ್ಟಾನ್ ಸ್ವಾಮಿ ಅವರನ್ನು ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದಾಗ್ಯೂ, ಅವರ ಸ್ಥಿತಿ ಕಳೆದ ವಾರ ಹದಗೆಟ್ಟಿತು ಮತ್ತು ಅವರನ್ನು ಭಾನುವಾರ ವೆಂಟಿಲೇಟರ್ ಬೆಂಬಲಕ್ಕೆ ಒಳಪಡಿಸಲಾಯಿತು. ಆದರೆ ಹೃದಯಾಘಾತದಿಂದ ಸ್ಟಾನ್ ಸ್ವಾಮಿ ಸೋಮವಾರ ನಿಧನರಾದರು.
ನ್ಯಾಯಾಂಗ ಬಂಧನಕ್ಕೂ ಮುನ್ನ ಆರೋಗ್ಯವಾಗಿದ್ದ ಸ್ಟ್ಯಾನ್ ಸ್ವಾಮಿ ಅವರ ಸ್ಥಿತಿ ಈ ಮಟ್ಟಕ್ಕೆ ತಲುಪಿರುವ ವಿಚಾರವನ್ನು ಕೆಲ ಸಂಘಟನೆಗಳು ಬಾಂಬೆ ಹೈಕೋರ್ಟ್ ಹಾಗೂ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಗಮನಕ್ಕೆ ತಂದಿವೆ. ಮಾನವ ಹಕ್ಕು ಆಯೋಗ ಈ ಸಂಬಂಧ ನಿನ್ನೆ ಮಹಾರಾಷ್ಟ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದ್ದು, ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿತ್ತು.

