ಮನೆ ಗೋಡೆ ಕುಸಿದು 23 ಜನರ ದುರ್ಮರಣ; ತಲಾ 2 ಲಕ್ಷ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ!

ಮುಂಬೈನ ಚೆಂಬೂರ್ ಮತ್ತು ವಿಖ್ರೋಲಿ ಪ್ರದೇಶಗಳಲ್ಲಿ ಭೂಕುಸಿತವಾಗಿದ್ದು, ಇದರಿಂದಾಗಿ ಮನೆಗಳ ಗೋಡೆ ಕುಸಿದಿವೆ. ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 23 ಜನರು ಸವನ್ನಪ್ಪಿದ್ದಾರೆ. ಮೃತಪಟ್ಟವರಿಗೆ ಕೇಂದ್ರ ಸರ್ಕಾರ ತಲಾ 2 ಲಕ್ಷ ಪರಿಹಾರ ಘೋಷಿಸಿದೆ.

ಘಟನೆಯನ್ನು ಹಲವಾರು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ಘಟನೆ ನಡೆದ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್‌ಡಿಆರ್‌ಎಫ್‌) ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಜುಲೈ 17 ಮತ್ತು ಜುಲೈ 18 ರ ಮಧ್ಯರಾತ್ರಿ ಮುಂಬೈನಲ್ಲಿ ಭಾರೀ ಮಳೆ ಸುರಿದಿದೆ. ಇದರಿಂದಾಗಿ ಚೆಂಬೂರ್‌ನ ವಾಶಿ ನಾಕಾ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದ್ದು, ಕೆಲವು ಮನೆಗಳ ಗೋಡೆ ಕುಸಿದು ಒಟ್ಟು 17 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಅಲ್ಲದೆ, ಮುಂಬೈನ ವಿಖ್ರೋಲಿ ಎಂಬಲ್ಲಿ ಭಾನುವಾರ ಮುಂಜಾನೆ ವಸತಿ ಕಟ್ಟಡ ಕುಸಿದು ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಎನ್‌ಡಿಆರ್‌ಎಫ್‌ ತಂಡದವರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಬೃಹತ್ ಮುಂಬೈ ಕಾರ್ಪೋರೇಷನ್ ತಿಳಿಸಿದೆ.

ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಪರಿಹಾರ ನಿಧಿಯಿಂದ ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ.ಗಳನ್ನು ನೀಡುವುದಾಗಿ ಘೋಷಿಸಿದರು. ಗಾಯಗೊಂಡವರಿಗೆ 50000ರೂ. ನೀಡಲಾಗುವುದು ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಭಾರತ V/S ಶ್ರೀಲಂಕಾ: ಎಲ್ಲರಿಗೂ ಅವಕಾಶ ನೀಡಬೇಕೆಂಬ ನಿಯಮವಿಲ್ಲ: ಶಿಖರ್ ಧವನ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights