ಬಿಎಸ್‌ಪಿ ಉಚ್ಚಾಟಿತ ಕೊಳ್ಳೆಗಾಲ ಶಾಸಕ ಎನ್‌.ಮಹೇಶ್‌ ಬಿಜೆಪಿಗೆ ಸೇರ್ಪಡೆ?

ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಅವರು ಬಿಜೆಪಿಗೆ ಹೋಗುವ ಬಗ್ಗೆ ತಮ್ಮ ಬೆಂಬಲಿಗರು ಮತ್ತು ಮುಖಂಡರ ಅಭಿಪ್ರಾಯ ಏನಿದು ಎಂದು ತಿಳಿಯಲು ಗೌಪ್ಯವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಕೊಳ್ಳೇಗಾಲ ತಾಲೂಕಿನ ಕುರುಬನಕಟ್ಟೆಯಲ್ಲಿ ಮಹೇಶ್‌ ಅವರು ಶನಿವಾರ ಸುಮಾರು 50ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಸಭೆ ನಡೆಸಿದ್ದಾರೆ. ತಮ್ಮ ಕ್ಷೇತ್ರ ಅಭಿವೃದ್ಧಿಯಾಗಬೇಕೆಂದರೆ ಆಡಳಿತ ಪಕ್ಷದಲ್ಲಿರುವುದು ಸೂಕ್ತ. ಅದಕ್ಕಾಗಿ ತಾವು ಬಿಜೆಪಿ ಸೇರಲು ಚಿಂತಿಸಿರುವುದಾಗಿ ಎಂದು ಅವರು ತಮ್ಮ ಬೆಂಬಲಿಗರಿಗೆ ಮನವೊಲಿಸಲು ಮುಂದಾದ್ದಾರೆ ಎನ್ನಲಾಗಿದೆ.

ಶಾಸಕ ಮಹೇಶ್‌ ಅವರು ಬಿಜೆಪಿ ಸೇರಲು ಯಾವುದೇ ಅಭ್ಯಂತರವಿಲ್ಲ ಎಂದು ಹಲವು ಮುಖಂಡರು ಮತ್ತು ಬೆಂಬಲಿಗರು ಹೇಳಿದ್ದಾರೆ ಎನ್ನಲಾಗಿದೆ.

ಮುಂಬರುವ ತಾಪಂ ಹಾಗೂ ಜಿಪಂ ಚುನಾವಣೆಗೂ ಮುನ್ನ ಶಾಸಕ ಮಹೇಶ್ ಬಿಜೆಪಿ ಸೇರ್ಪಡೆಯಾಗುವುದು ಖಚಿತ ಎನ್ನಲಾಗುತ್ತಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಮಹೇಶ್ ಕೆಲ ತಿಂಗಳ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅದಾದ ಬಳಿಕ, ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸದನಕ್ಕೆ ಗೈರಾಗಿ ಬಿಎಸ್ಪಿ ನಾಯಕಿ ಮಾಯವತಿಯವರ ಕೆಂಗಣ್ಣಿಗೆ ಗುರಿಯಾಗಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದರು.

Read Also: ಬಿಜೆಪಿ ದೆಹಲಿ ಅಧಿವೇಶನದ ವಿಸ್ತರಣೆಗೆ ಬಯಸಿದೆ; ಆದರೆ, ಗೋವಾದಲ್ಲಿ ಅಲ್ಲ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights