‘ಅವರನ್ನು ಶೂನಿಂದ ಹೊಡೆಯಬೇಕು’: ಮೋದಿ, ಷಾ ವಿರುದ್ಧ ಕಾಂಗ್ರೆಸ್‌ ಶಾಸಕ ವಾಗ್ದಾಳಿ; FIR ದಾಖಲು!

ಇಸ್ರೇಲ್‌ ಮೂಲದ ಪೆಗಾಸಸ್‌ ಸಾಫ್ಟ್‌ವೇರ್‌ ಬಳಸಿ ಹಲವರ ಫೋನ್‌ ಹ್ಯಾಕ್‌ ಮಾಡಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ರಾಜಸ್ಥಾನ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ ಕಾಂಗ್ರೆಸ್‌ ಶಾಸಕ ಗಣೇಶ್‌ ಘೋಗ್ರಾ ಅವರು ರಾಜ್ಯಪಾಲ ಕಲ್ರಾಜ್ ಮಿಶ್ರಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಅಸಂವಿಧಾನಿಕ ಭಾಷೆಯನ್ನು ಬಳಸಿದ್ದಾರೆ.

ಪೆಗಾಸಸ್‌ ಹ್ಯಾಕಿಂಗ್‌ ವಿವಾದದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಅಮಿತ್‌ ಶಾ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ನಾಯಕರು ರಾಜಭವನದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋಟಾಸ್ರಾ, ಪಕ್ಷದ ಶಾಸಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರತಿಭಟನೆಯ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಘೋಗ್ರಾ, ರಾಜ್ಯಪಾಲರು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಮೋದಿ ಮತ್ತು ಷಾ ಅವರು ಈ ಹಿಂದೆ ಕುಖ್ಯಾತ ಕ್ರಿಮಿನಲ್ ಜೋಡಿಗಳಲಾಗಿದ್ದರು. ಅವರು (ಮೋದಿ ಮತ್ತು ಷಾ) ಭಾರತವನ್ನು ಗುಲಾಮರನ್ನಾಗಿ ಮಾಡಲು ಬಯಸುತ್ತಿದ್ದಾರೆ. ಈಗ, ಅವರು ಹ್ಯಾಕಿಂಗ್‌ ಮೂಲಕ ನಮ್ಮ ವೈಯಕ್ತಿಕ ಮಾತುಕತೆಗಳನ್ನು ಟೇಪ್ ಮಾಡುತ್ತಿದ್ದಾರೆ. ಅವರನ್ನು ಹಿಮ್ಮೆಟ್ಟಬೇಕು, ಬೂಟುಗಳಿಂದ ಹೊಡೆಯಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಬಳಸಿ ಭಾರತೀಯ ಪತ್ರಕರ್ತರ ಮೇಲೆ ನಿಗಾ; ವಿರೋಧಿಗಳನ್ನು ನಿಯಂತ್ರಿಸಲು ಸರ್ಕಾರ ಯತ್ನ!?

ಅವರ ಹೇಳಿಕೆಯ ವಿರುದ್ದ ಬಿಜೆಪಿ ಮುಖಂಡರು ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇತರ ಹಲವಾರು ಬಿಜೆಪಿ ನಾಯಕರು ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಬಿಜೆಪಿಯ ರಾಜ್ಯ ಅಧ್ಯಕ್ಷ ಸತೀಶ್ ಪೂನಿಯಾ ಅವರು ಇದು “ಕಾಂಗ್ರೆಸ್ಸಿನ ಸಾಂಪ್ರದಾಯಿಕ ಭಾಷೆ” ಎಂದು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ರಾಜಸ್ಥಾನ್ ಕಾಂಗ್ರೆಸ್ ಅಧ್ಯಕ್ಷರು ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಹೇಳಿದ್ದಾರೆ.

ವಿವಿಧ ರಾಜಕೀಯ ನಾಯಕರ ಫೋನ್‌ ಹ್ಯಾಕ್‌ ಮಾಡಿರುವುದು ಸಂವಿಧಾನದಲ್ಲಿ ಪ್ರತಿಪಾದಿಸಿರುವ ಗೌಪ್ಯತೆ ಹಕ್ಕಿನ ಉಲ್ಲಂಘನೆಯಾಗಿದೆ. ಹೀಗಾಗಿ ಅಮಿತ್‌ ಶಾ ರಾಜೀನಾಮೆ ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪೆಗಾಸಸ್‌ನಲ್ಲಿ ಮೋದಿ ಸರ್ಕಾರದ ಪಾತ್ರವೇನು? ಆರ್‌ಟಿಐ ಅರ್ಜಿ ಸಲ್ಲಿಕೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights