ಬಿಎಸ್‌ವೈ ಸಿಎಂ ಖುರ್ಚಿ ಭದ್ರ; ಯಡಿಯೂರಪ್ಪ ಕಾರ್ಯ ವಿಧಾನವನ್ನು ಶ್ಲಾಘಿಸಿದ ಜೆಪಿ ನಡ್ಡಾ!
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಭಾರೀ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕೆಲಸಗಳ ಬಗ್ಗೆ ಶ್ಲಾಘಿಸಿದ್ದಾರೆ. ಇದು ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುವ ಸಾಧ್ಯತೆಯನ್ನು ತಳ್ಳಿಹಾಕಿದೆ.
“ಯಡಿಯೂರಪ್ಪ ಉತ್ತಮ ಕೆಲಸ ಮಾಡಿದ್ದಾರೆ. ಕರ್ನಾಟಕವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಡಿಯೂರಪ್ಪ ಅವರು ತಮ್ಮದೇ ಆದ ರೀತಿಯಲ್ಲಿ ಸಮಸ್ಯೆ-ಸವಾಲುಗಳನ್ನು ಪರಿಹರಿಸುತ್ತಿದ್ದಾರೆ” ಎಂದು ಗೋವಾದಲ್ಲಿ ನಡ್ಡಾ ಹೇಳಿದ್ದಾರೆ.
ಕರ್ನಾಟಕದಲ್ಲಿ ನಾಯಕತ್ವದ ಬಿಕ್ಕಟ್ಟು ಇದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ನಡ್ಡಾ, “ನಿಮಗೆ ಹಾಗೆ ಅನ್ನಿಸುತ್ತಿದೆಯೇ, ನಮಗೆ ಹಾಗೆ ಅನಿಸುತ್ತಿಲ್ಲ” ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರಿಗೆ ಜುಲೈ 26 ಅಧಿಕಾರದ ಕೊನೆಯ ದಿನವಾಗಬಹುದು ಎಂದು ಹೇಳಾಗಿತ್ತು. ಜುಲೈ 25 ರಂದ ಸಂಜೆಯ ವೇಳೆಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಅದರಂತೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಬಿಎಸ್‌ವೈ ಹೇಳಿದ್ದರು.
ಹೈಕಮಾಂಡ್ ಸಂದೇಶಕ್ಕಾಗಿ ಕಾಯುತ್ತಿದ್ದ ವೇಳೆಯೇ, ಜೆಪಿ ನಡ್ಡಾ ಅವರು ಯಡಿಯೂರಪ್ಪ ಅವರ ಕೆಲಸ-ಕಾರ್ಯಗಳ ಬಗ್ಗೆ ಶ್ಲಾಘನೆಯ ಮಾತನಾಡಿದ್ದು, ಇದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂಬುದನ್ನು ಸೂಚಿಸಿದೆ ಎನ್ನಲಾಗಿದೆ.
ಕೇಂದ್ರ ನಾಯಕತ್ವದ ನಿರ್ಧಾರಕ್ಕೆ ತಾನು ಬದ್ಧನಾಗಿರುತ್ತೇನೆ. ನಾನು ಪಕ್ಷದಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದೇನೆ. ನನಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ಮೇಲೆ ಸಂಪೂರ್ಣ ವಿಶ್ವಾಸವಿದೆ. ಅವರ ತೀರ್ಮಾನಕ್ಕೆ ಬದ್ದನಾಗಿರುತ್ತೇನೆ. ಇನ್ನೂ 15 ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಬಿಎಸ್‌ವೈ ಭಾನುವಾರ ಹೇಳಿದ್ದರು.
ಇದನ್ನೂ ಓದಿ: ಮೊಟ್ಟೆಯಲ್ಲಿ ಬಂಡಾರ ಕದ್ದ ಸಚಿವೆ; ಶಶಿಕಲಾ ಜೊಲ್ಲೆ ಮನೆ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ!

