ಟ್ರಕ್ ಡಿಕ್ಕಿ ಹೊಡೆದು ರಸ್ತೆ ಬದಿ ಮಲಗಿದ್ದ 18 ಕಾರ್ಮಿಕರ ಮೇಲೆ ಹರಿದ ಬಸ್!

ವೇಗವಾಗಿ ಬಂದು ನಿಂತ ಬಸ್ ಗೆ  ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ಮಲಗಿದ್ದ 18 ಕಾರ್ಮಿಕರ ಮೇಲೆ ಬಸ್ ಹರಿದ ದಾರುಣ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ರಾಜ್ಯ ರಾಜಧಾನಿ ಲಖನೌದಿಂದ 28 ಕಿ.ಮೀ ದೂರದಲ್ಲಿರುವ ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಟ್ರಕ್ ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್ ಉರುಳಿ ರಸ್ತೆ ಬದಿ ಮಲಗಿದ್ದ 18 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಗಾಯಾಳುಗಳನ್ನು ಬಿಹಾರ ಮೂಲದ ಕಾರ್ಮಿಕರು ಎನ್ನಲಾಗುತ್ತಿದೆ. ಇವರು ಹರಿಯಾಣ ಮತ್ತು ಪಂಜಾಬ್‌ನಿಂದ ಹಿಂದಿರುಗುತ್ತಿದ್ದಾಗ ಘಟನೆ ಸಂಭವಿಸಿದೆ.

ಟ್ರಕ್ ಹಿಂದಿನಿಂದ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಬಸ್ ಮುಂದೆ ಸಾಗಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದಿದೆ. ಗಾಯಗೊಂಡ ಕಾರ್ಮಿಕರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಸ್‌ನ ಕೆಳಗೆ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸತ್ಯ ನಾರಾಯಣ್ ಸಬತ್ ತಿಳಿಸಿದ್ದಾರೆ.

ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ದುಃಖ ವ್ಯಕ್ತಪಡಿಸಿದ್ದಾರೆ.

“ನಾವು ಸುಮಾರು 130 ಜನರಿದ್ದೆವು. ರಾತ್ರಿ 8 ರ ಸುಮಾರಿಗೆ ನಿಲುಗಡೆ ಮಾಡಿದ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದಿದೆ. ನಮ್ಮಲ್ಲಿ ಕೆಲವರು ರಸ್ತೆಯಲ್ಲಿ ಮಲಗಿದ್ದರು, ಕೆಲವರು ಊಟ ಮಾಡುತ್ತಿದ್ದರು ಇನ್ನೂ ಕೆಲವರು ವಿಶ್ರಾಂತಿ ಪಡೆಯುತ್ತಿದ್ದರು. ಇದರಿಂದಾಗಿ ಅನೇಕ ಸಾವುನೋವು ಸಂಭವಿಸಿದೆ” ಎಂದು ಬದುಕುಳಿದ ಭಾರತ್ ಹೇಳಿದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights