ಬೆಂಗಳೂರಿನಲ್ಲಿ ರಾತ್ರಿ ಕರ್ಫ್ಯೂ ಜಾರಿ?; ನಿಯಮ ಉಲ್ಲಂಘಿಸಿದ್ರೆ ವಾಹನಗಳು ಸೀಜ್‌!

ಕೊರೊನಾ 2ನೇ ಅಲೆಯ ನಂತರ ಬೆಂಗಳೂರಿನಲ್ಲಿ ಇಳಿಕೆ ಕಂಡಿದ್ದ ಕೊರೊನಾ ಪ್ರಕರಗಳ ಸಂಖ್ಯೆ ಮತ್ತೆ ಏರಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ 3ನೇ ಅಲೆಯ ಭಯ ಆರಂಭವಾಗಿದ್ದು, ಕೊರೊನಾ ಹರಡುವಿಕೆಗೆ ಈಗಿನಿಂದಲೇ ಕಡಿವಾಣ ಹಾಕಲು ರಾಜಧಾನಿಯಲ್ಲಿ ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಗ್ಗೆ 05 ಗಂಟೆಯವರೆಗೆ ನೈಟ್ ಕರ್ಪ್ಯೂ  ಜಾರಿ ಮಾಡುಲು ಬಿಬಿಎಂಪಿ ಸಿದ್ದತೆ ನಡೆಸುತ್ತಿದೆ.

ಈ ವೇಳೆಯಲ್ಲಿ ಅನಗತ್ಯವಾಗಿ ಓಡಾಡುವಂತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಲ್ಲದೇ, ವಾಹನಗಳನ್ನು ಸೀಜ್ ಕೂಡ ಪೊಲೀಸರು ಮಾಡಲಿದ್ದಾರೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಗೌರವ್‌ ಗುಪ್ತ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, “ಕೊರೋನಾ ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕಟ್ಟು ನಿಟ್ಟಿನ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ತುರ್ತು ಸಂದರ್ಭ ಹೊರತಾಗಿ ಯಾರು ರಾತ್ರಿವೇಳೆ ಓಡಾಡುವಂತಿಲ್ಲ. ನಿಯಮ ಉಲ್ಲಂಘಿಸಿದ್ದಾರೆ, ಅವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು” ಎಂದು ತಿಳಿಸಿದ್ದಾರೆ.

ನೈಟ್ ಕರ್ಪ್ಯೂ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ತೆರಳುವವರು, ವೈದ್ಯಕೀಯ ಸೇವೆ, ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು, ಕಂಪನಿಗಳ ರಾತ್ರಿ ಪಾಳಿ ಉದ್ಯೋಗಿಗಳು, ವಿಮಾನ, ರೈಲು, ಬಸ್‌ಗಳ ಸಂಚಾರಕ್ಕೆ ವಿನಾಯತಿ ಇದೆ.

ಇದನ್ನೂ ಓದಿ: ಹೆಚ್ಚುತ್ತಿವೆ ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳು; ರಾಜ್ಯದಲ್ಲಿ 2,494 ದೂರು ದಾಖಲು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights