ದೇಶದಲ್ಲಿ ಕೊರೊನಾ ಏರಿಳಿಕೆ : ಹೊಸದಾಗಿ 38,353 ಕೇಸ್ ಪತ್ತೆ – 497 ಜನ ಬಲಿ!

ದೇಶದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಳಿಕೆಯಾಗುತ್ತಿದ್ದು ಕಳೆದ 140 ದಿನಗಳಲ್ಲಿ ಇಂದು ಕಡಿಮೆ ಕೊರೊನಾ ಪ್ರಕರಣಗಳು ದಾಖಲಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಭಾರತದಲ್ಲಿ 38,353 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು 497 ಜನ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ ಕೇರಳದಲ್ಲಿ ಕೋವಿಡ್ -19 ನಿಂದ ಗರಿಷ್ಠ (152) ಸಾವು ವರದಿಯಾಗಿದ್ದು, ಮಹಾರಾಷ್ಟ್ರದಲ್ಲಿ 137 ಜನ ಬಲಿಯಾಗಿದ್ದಾರೆ.

ಇನ್ನೂ 38,353 ಹೊಸ ಕೊರೊನಾ ಪ್ರಕರಣಗಳ ಪೈಕಿ ಕೇರಳದಲ್ಲಿ 21,119 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 5,609 ಪ್ರಕರಣಗಳು, ತಮಿಳುನಾಡು 1,893 , ಆಂಧ್ರ ಪ್ರದೇಶ 1,461 ಪ್ರಕರಣಗಳು ಮತ್ತು ಕರ್ನಾಟಕದಲ್ಲಿ 1,338 ಪ್ರಕರಣಗಳು ದಾಖಲಾಗಿವೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,20,36,511ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,29,125ಕ್ಕೆ ಏರಿಕೆಯಾಗಿದೆ.ಕಳೆದ 24 ಗಂಟೆಗಳಲ್ಲಿ ಒಟ್ಟು 40,013 ಕೋವಿಡ್ -19 ರೋಗಿಗಳು ಚೇತರಿಸಿಕೊಂಡಿದ್ದು ಈವರೆಗೆ ದೇಶಾದ್ಯಂತ ಒಟ್ಟು 3,12,20,981 ಜನ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳು 3,86,351 ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ ಭಾರತ 41,38,646 ಡೋಸ್‌ಗಳನ್ನು ನೀಡಿದ್ದು, ಇದು ಒಟ್ಟು 51,90,80,524 ಡೋಸ್‌ಗಳನ್ನು ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 17,77,962 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights