ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳು; ಮೋದಿ ಸರ್ಕಾರದ ವಿರುದ್ದ ಕಾಂಗ್ರೆಸ್‌ ಪ್ರತಿಭಟನೆ!

ದಲಿತರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದಲಿತರನ್ನು ರಕ್ಷಿಸವಲ್ಲಿ ವಿಫಲವಾಗಿದೆ ಎಂದು ಆರೋಪಿರುವ ಕಾಂಗ್ರೆಸ್‌ ಗುರುವಾರ ಪ್ರತಿಭಟನೆ ನಡೆಸಲಿದೆ.

ಕಾಂಗ್ರೆಸ್‌ನ ಪರಿಶಿಷ್ಟ ಜಾತಿ (ಎಸ್‌ಸಿ) ವಿಭಾಗದ ಅಧ್ಯಕ್ಷ ನಿತಿನ್‌ ರಾವುತ್‌ ಅವರು ಮೋದಿ ಸರ್ಕಾರವು ವಾರ್ಷಿಕ ಬಜೆಟ್ ನಲ್ಲಿ ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಮೊತ್ತವನ್ನು ಕಡಿತಗೊಳಿಸುತ್ತಿದೆ, ವಿದ್ಯಾರ್ಥಿವೇತನವನ್ನು ನಿಲ್ಲಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

“ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ದಲಿತರು ಮತ್ತು ಇತರ ತಳ ಸಮುದಾಯಗಳ ಮೇಲಿನ ದೌರ್ಜನ್ಯಗಳು ಮತ್ತು ದೌರ್ಜನ್ಯ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚಾಗಿದೆ” ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.

“ನಾವು ಈ ನಿರ್ಣಾಯಕ ಸಮಸ್ಯೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಂದ ಉತ್ತರಗಳನ್ನು ಬಯಸುತ್ತೇವೆ. ‘ಹಲ್ಲಾ ಬೋಲ್’ ಪ್ರತಿಭಟನೆ 12 ನೇ ಆಗಸ್ಟ್ 2021 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ರವರೆಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿದೆ” ಎಂದು ಕಾಂಗ್ರೆಸ್‌ ಹೇಳಿದೆ.

ಇದನ್ನೂ ಓದಿ: ಅತ್ಯಾಚಾರ ಎಸಗಿದ್ದು 11 ನಿಮಿಷ ಮಾತ್ರವೆಂದು ಶಿಕ್ಷೆ ಕಡಿಮೆ ಮಾಡಿದ ಕೋರ್ಟ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights