ಅನುದಾನ ಕೊಡದಿದ್ದರೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ: ಶಾಸಕ ಎಂಪಿ ಕುಮಾರಸ್ವಾಮಿ

ನನ್ನ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಅಗತ್ಯವಿರುವಷ್ಟು ಅನುದಾನ ಕೊಡದೇ ಇದ್ದರೆ ನಾನು ಮುಂದಿನ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂದು ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಮೂಡಿಕೆರೆ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರೂ ಈವರೆಗೆ ಸ್ಪಂದನೆ ಸಿಕ್ಕಿಲ್ಲ. ನೂತನ ಸರ್ಕಾರದಲ್ಲಾದರೂ ಅನುಮಾನ ಸಿಗದಿದ್ದರೆ ನಾನು ಬೇರೆಯೇ ಯೋಚನೆ ಮಾಡಬೇಕಾಗುತ್ತದೆ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದೇನೆ. ಅವರು ನಮ್ಮ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸಲು ನಾನೊಬ್ಬ ಶಾಸಕನಾಗಿ ನಮ್ಮ ಕ್ಷೇತ್ರದ ಅನುದಾನಕ್ಕಾಗಿ ಹೋರಾಟ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಅನುದಾನ ಸಿಗದಿದ್ದರೆ ನಾನು ಜನರಿಗೆ ಮುಖ ತೋರಿಸುವುದು ಹೇಗೆ? ಎಂದು ಹೇಳಿದ್ದಾರೆ.

ಕಳೆದ ವರ್ಷ ನಮ್ಮ ಕ್ಷೇತ್ರದಲ್ಲಿ ಪ್ರವಾಹ ಬಂದಿತ್ತು. ಆಗ ನೂರಾರು ಮನೆಗಳು ಹಾನಿಯಾಗಿವೆ. ಆಗ ಸಿಎಂ ಮತ್ತು ಕಂದಾಯ ಸಚಿವರು ಭೇಟಿ ನೀಡಿದ್ದರು. ಆದರೂ, ಅನುದಾನ ಸಿಕ್ಕಿಲ್ಲ. ಕ್ಷೇತ್ರದಲ್ಲಿ ಜನರು ನನ್ನ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 450 ವರ್ಷಗಳ ಇತಿಹಾಸವುಳ್ಳ ಗೋಲ್‌ಗುಂಬಜ್‌ನ ಛಾವಣಿಯ ಒಂದು ಭಾಗ ಕುಸಿದಿದೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights