ಪರೀಕ್ಷೆಗೆ ತೆರಳುತ್ತಿದ್ದಾಗ ಅಪಘಾತ; ಆಂಬುಲೆನ್ಸ್ನಲ್ಲೇ ಬಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು!
ಪದವಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ಬೈಕ್ ಅಪಘಾತಕ್ಕೀಡಾಗಿದ್ದು, ಇಬ್ಬರು ವಿದ್ಯಾರ್ಥಿಗಳ ಆಂಬುಲೆನ್ಸ್ ಮೂಲಕ ಕಾಲೇಜಿಗೆ ಬಂದು ಪರೀಕ್ಷೆ ಬರೆದಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.
ಗುರುವಾರ ಬೆಳಗ್ಗೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿಂದ ಬಂದ ಮತ್ತೊಂದು ಬೈಕ್ ಡಿಕ್ಕಿಹೊಡೆದಿದ್ದು, ವಿದ್ಯಾರ್ಥಿಗಳು ಗಾಯಗೊಂಡಿದ್ಧಾರೆ. ಗಾಯಗೊಂಡು ವಿದ್ಯಾರ್ಥಿಗಳು ಆಂಬುಲೆನ್ಸ್ನಲ್ಲಿಯೇ ಬಂದು ಪರೀಕ್ಷೆ ಬರೆದಿದ್ದಾರೆ.
ಕುಂದಾಪುರದ ಗಡಿಭಾಗವಾದ ಶಿರೂರು ಗ್ರಾಮದ ಮಸಾಯಿದ್ ಮತ್ತು ಗಂಗೊಳ್ಳಿ ಗ್ರಾಮದ ನಿವಾಸಿ ವಾಜಿದ್ ಗಾಯಗೊಂಡ ವಿದ್ಯಾರ್ಥಿಗಳು. ಅವರು ಕುಂದಾಪುರದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಪ್ರಥಮ ವರ್ಷದ ಪದವಿ ಪರೀಕ್ಷೆ ಬರೆಯಲು ಮಸಾಯಿದ್ ಶಿರೂರಿನಿಂದ ಗಂಗೊಳ್ಳಿಗೆ ತೆರಳಿ ತನ್ನ ಸ್ನೇಹಿತ ವಾಜಿದ್ ನನ್ನು ಕರೆದುಕೊಂಡು ಕಾಲೇಜಿಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
ಅಪಘಾತದಲ್ಲಿ ತೀವ್ರ ಸ್ವರೂಪದ ಗಾಯಗಳಾದರೂ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಆಂಬುಲೆನ್ಸ್ ಮೂಲಕವೇ ವಿದ್ಯಾರ್ಥಿಗಳಿಬ್ಬರೂ ಭಂಡಾರ್ಕಾರ್ಸ್ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದಾರೆ. ಪರೀಕ್ಷೆ ಬರೆದಿದ್ದಾರೆ. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಇಂಧನ ಬೆಲೆಯನ್ನು ಕಡಿತಗೊಳಿಸುವ ಪ್ರಸ್ತಾಪವಿಲ್ಲ: ಸಿಎಂ ಬೊಮ್ಮಾಯಿ

