ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಸೆ.8 ರಿಂದ ಪ್ರತಿಭಟನೆ: ಕೇಂದ್ರಕ್ಕೆ RSS ಅಂಗಸಂಸ್ಥೆ ಎಚ್ಚರಿಕೆ!

ಆಗಸ್ಟ್‌ ತಿಂಗಳ ಅಂತ್ಯದೊಳಗೆ ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯದಿದ್ದರೆ ಮತ್ತು ಎಂಎಸ್‌ಪಿಯ ಮೇಲಿನ ರೈತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ವಿಫಲವಾದರೆ ಸೆಪ್ಟೆಂಬರ್ 8 ರಿಂದ ದೇಶವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ಆರ್‌ಎಸ್‌ಎಸ್-ಅಂಗಸಂಸ್ಥೆ ಭಾರತೀಯ ಕಿಸಾನ್ ಸಂಘ (ಬಿಕೆಎಸ್) ಎಚ್ಚರಿಕೆ ನೀಡಿದೆ.

ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ವೆಚ್ಚದ ಆಧಾರದ ಮೇಲೆ ನಿರ್ಧರಿಸಬೇಕು. ವಿವಾದಿತ ಕೃಷಿ ಕಾನೂನುಗಳಿಂದ ಉಂಟಾಗಿರುವ ವಿವಾದವನ್ನು ಪರಿಹರಿಸಲು, ರೈತರು ತೋರಿರುವ ಆತಂಕವನ್ನು ಗಮನದಲ್ಲಿಟ್ಟುಕೊಂಡು ಹೊಸ ಕಾನೂನನ್ನು ರೂಪಿಸಬೇಕು ಎಂದು ಬಿಕೆಎಸ್ ಹೇಳಿದೆ.

“ಈ ಬೇಡಿಕೆಗಳಿಗಾಗಿ, ರಾಷ್ಟ್ರವ್ಯಾಪಿ ಸಾಂಕೇತಿಕ ಧರಣೆಯನ್ನು ಸೆಪ್ಟೆಂಬರ್ 8 ರಂದು ಆಯೋಜಿಸಲಾಗುವುದು. ಬೇಡಿಕೆಗಳನ್ನು ಈಡೇರಿಸಲು ಮೋದಿ ಸರ್ಕಾರಕ್ಕೆ ಆಗಸ್ಟ್ 31 ರವರೆಗೆ ಕಾಲಾವಕಾಶ ನೀಡಲಾಗಿದೆ. ನಮ್ಮ ಬೇಡಿಕೆಗಳ ಬಗ್ಗೆ ಸಕಾರಾತ್ಮಕ ನಿಲುವು ತೆಗೆದುಕೊಳ್ಳದಿದ್ದರೆ, ಸೆಪ್ಟೆಂಬರ್‌ 8ರ ಧರಣಿಯ ನಂತರ , ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಬಿಕೆಎಸ್ ಖಜಾಂಚಿ ಯುಗಲ್ ಕಿಶೋರ್ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಘೋಸಿ ಸಂಸದ ಅತುಲ್ ರಾಯ್ ಮೇಲೆ ಅತ್ಯಾಚಾರ ಆರೋಪ ಮಾಡಿದ ಯುವತಿ ಸಾವು!

“ರೈತರು ತಮ್ಮ ಉತ್ಪನ್ನಗಳಿಗೆ ಸರಿಯಾ ಬೆಲೆಯನ್ನು ಪಡೆಯುತ್ತಿಲ್ಲ. ಎಂಎಸ್‌ಪಿ ಲಾಭದಾಯಕವಾಗಿಲ್ಲ. ಈ ಕಾರಣದಿಂದಾಗಿ ತಮ್ಮ ಸಂಸ್ಥೆಯು ಪ್ರತಿಭಟನೆಗೆ ಮುಂದಾಗುತ್ತಿದೆ” ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್ ಸಂಘಟನೆ ನರೇಂದ್ರ ಮೋದಿ ಸರ್ಕಾರವನ್ನು ನಡೆಸುವುದಿಲ್ಲ, ಇಲ್ಲದಿದ್ದರೆ ನಮ್ಮ ಸಂಘಟನೆ ಪ್ರತಿಭಟನೆಗೆ ಮುಂದಾಗುತ್ತಿರಲಿಲ್ಲ. ರೈತರ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳ ಬಗ್ಗೆಯೂ ಯಾವುದೇ ಸರ್ಕಾರ ಗಂಭೀರವಾಗಿಲ್ಲ” ಎಂದು ಬಿಕೆಎಸ್ ನಾಯಕ ಹೇಳಿದ್ದಾರೆ.

ರೈತರ ಆದಾಯವನ್ನು ದ್ವಿಗುಣಗೊಳಿಸುವ ಮೋದಿ ಸರ್ಕಾರದ ಭರವಸೆಯ ಬಗ್ಗೆ ಕೇಳಿದಾಗ, ಅವರು ಎಷ್ಟು ಖರ್ಚು ಮಾಡುತ್ತಿದ್ದಾರೆ ಎಂಬುದನ್ನು ಮೊದಲು ನಿರ್ಧರಿಸಬೇಕು ಎಂದು ಹೇಳಿದ್ದಾರೆ.

“ಅಟಲ್ ಬಿಹಾರಿ ವಾಜಪೇಯಿ ಮತ್ತು ನರೇಂದ್ರ ಮೋದಿ ಸರ್ಕಾರಗಳು ವೆಚ್ಚದ ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಪರಿಗಣಿಸಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಬಳೆ ವ್ಯಾಪಾರಿ ಮೇಲೆ ಗುಂಪು ಹಲ್ಲೆ; ‘ಬಳೆ ಜಿಹಾದ್’ ಪಟ್ಟ ಕಟ್ಟಿದ ನ್ಯೂಸ್‌ 18 ಮತ್ತು ಜೀ ನ್ಯೂಸ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights