ಅಶ್ಲೀಲ ವಿಡಿಯೋ ಕಾಲ್‌ ಕ್ಲಿಪ್‌ ವೈರಲ್‌; ತಮಿಳು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ತಮಿಳುನಾಡು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಟಿ ರಾಘವನ್‌ ಅವರದ್ದು ಎನ್ನಲಾದ ವೀಡಿಯೋ ಕರೆಯ ಅಶ್ಲೀಲ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ತಮ್ಮ ಸ್ಥಾನಕ್ಕೆ ರಾಘವನ್‌ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಕಾರ್ಯಕರ್ತೆಯೊಂದಿಗೆ ರಾಘವನ್‌ ವಿಡಿಯೋ ಕಾಲ್‌ನಲ್ಲಿ ಅಶ್ಲೀಲವಾಗಿ ಕಾಣಿಸಿಕೊಂಡಿದ್ದಾರೆ ಎನ್ನಲಾದ ವಿಡಿಯೋವನ್ನು ಬಿಜೆಪಿ ಕಾರ್ಯಕರ್ತ ಮದನ್‌ ರವಿಚಂದ್ರನ್‌ ಎಂಬಾತ ಯೂಟ್ಯೂಬ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಈ ಆರೋಪವನ್ನು ನಿರಾಕರಿಸಿರುವ ರಾಘವನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಕಾನೂ ನು ಕ್ರಮಕ್ಕೆ ಮುಂದಾಗುವುದಾಗಿ ಅವರು ಟ್ವೀಟ್‌ ಮಾಡಿದ್ದಾರೆ.

“ಇಂದು ಬೆಳಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ವೀಡಿಯೊ ಕುರಿತು ನನಗೆ ತಿಳಿದು ಬಂದಿದೆ. ಇದು ನನಗೆ ಮತ್ತು ಪಕ್ಷಕ್ಕೆ ಕಳಂಕ ತರುವ ಸಲುವಾಗಿ ಬಿಡುಗಡೆ ಮಾಡಲಾಗಿದೆ. ನಾನು ರಾಜ್ಯಾಧ್ಯಕ್ಷ ಅಣ್ಣಾಮಲೈಯವರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿನ ನನ್ನ ಹುದ್ದೆಗೆ ನಾನು ರಾಜೀನಾಮೆ ನೀಡುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ದೇವಾಲಯಗಳಲ್ಲಿ ಮಹಿಳೆಯರು – ಅಬ್ರಾಹ್ಮಣರಿಗೆ ಅರ್ಚಕ ಹುದ್ದೆ; ರಾಜ್ಯದಲ್ಲೂ ಜಾರಿಗೆ ಆಗ್ರಹ!

“ತಮಿಳುನಾಡಿನ ಜನರಿಗೆ, ಪಕ್ಷದ ಕಾರ್ಯಕರ್ತರಿಗೆ ಮತ್ತು ನನ್ನ ಜೊತೆಗಿರುವವರಿಗೆ ನಾನು ಏನೆಂಬುದು ತಿಳಿದಿದೆ. ನಾನು 30 ವರ್ಷಗಳಿಂದ ಯಾವುದೇ ಪ್ರತಿಫಲ ಬಯಸದೇ ಕೆಲಸ ಮಾಡುತ್ತಿದ್ದೇನೆ. ಈ ಪ್ರಕರಣದ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ. ಸತ್ಯವು ಮೇಲುಗೈ ಸಾಧಿಸಲಿದೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತ ರವಿಚಂದ್ರನ್ ಎಂಬಾತ ತನ್ನ ಯೂಟ್ಯೂಬ್ ಚಾನೆಲ್ ಮದನ್ ಡೈರಿಯಲ್ಲಿವಿಡಿಯೋವನ್ನು ಬಿಡುಗಡೆ ಮಾಡಿದ್ದಾನೆ. ಅಲ್ಲದೆ, ತಮ್ಮ ತಂಡದಲ್ಲಿ ಆ ರೀತಿಯ 15 ನಾಯಕರ ಆಡಿಯೋ ಮತ್ತು ವಿಡಿಯೋ ಕ್ಲಿಪ್‌ಗಳಿವೆ. ಅವುಗಳನ್ನು ಕಾಲಕ್ರಮೇಣ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿ ಮುಖಂಡರಿಂದ ಲೈಂಗಿಕ ಶೋಷಣೆ ನಡೆಯುತ್ತಿದೆ. ಅಂತಹ ವ್ಯಕ್ತಿಗಳಿಂದ ಪಕ್ಷವನ್ನು ಸ್ವಚ್ಛಗೊಳಿಸುವುದೇ ನಮ್ಮ ಗುರಿ ಎಂದು ರವಿಚಂದ್ರನ್‌ ಹೇಳಿದ್ದಾರೆ.

“ನಾವು ಈ ಆರೋಪವನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ನಮ್ಮ ಪಕ್ಷದ ರಾಜ್ಯ ಕಾರ್ಯದರ್ಶಿ ಮಲರ್ಕೊಡಿ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಲಾಗುವುದು. ಆರೋಪಿಯಾಗಿ ಸಾಬೀತಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತಿಳಿಸಿದ್ದಾರೆ.

ಇದನ್ನೂ ಓದಿ: ಮೇಕೆದಾಟು: ತಮಿಳುನಾಡು ಪರ ರಾಜ್ಯದ BJP ಶಾಸಕ; ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights