ಯೋಗಿಗೆ ಸವಾಲು; ಹೊಸ ಪಕ್ಷ ಸ್ಥಾಪಿಸಿದ ಐಪಿಎಸ್ ಅಧಿಕಾರಿ; ಯೋಗಿ ವಿರುದ್ದವೇ ಸ್ಪರ್ಧೆ!
ಸರ್ಕಾರಿ ಕೆಲಸ ಮಾಡಲು ನೀವು ಯೋಗ್ಯರಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಲವಂತದಿಂದಾಗಿ ನಿವೃತ್ತಿ ಪಡೆದಿದ್ದ ಮಾಜಿ ಐಪಿಎಸ್ ಅಧಿಕಾರಿ ಮಿತಾಬ್ ಠಾಕೂರ್ ಅವರು ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ.
ಅಲ್ಲದೆ, ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಯೋಗಿ ವಿರುದ್ದ ಠಾಕೂರ್ ಸ್ಪರ್ಧಿಸಲಿದ್ದಾರೆ ಎಂದು ಠಾಕೂರ್ ಅವರ ಪತ್ನಿ ಈ ಹಿಂದೆಯೇ ಘೋಷಿಸಿದ್ದರು.
ಈಗಾಗಲೇ ನಾನು ಅಧಿಕಾರ್ ಸೇನಾ ಎಂಬ ಸಂಘಟನೆ ಸ್ಥಾಪಿಸಿಕೊಂಡಿದ್ದೇನೆ. ಶೀಘ್ರದಲ್ಲೇ ಬೆಂಬಲಿಗರು ಮತ್ತು ಹಿತೈಷಿಗಳ ಸಭೆ ಕರೆದು ಹೊಸ ಪಕ್ಷ ಘೋಷಣೆ ಮಾಡುವುದಾಗಿ ಠಾಕೂರ್ ಘೋಷಣೆ ಮಾಡಿದ್ದಾರೆ.
ಇದು ತತ್ವಗಳಿಗಾಗಿ ಹೋರಾಟ. ಆದಿತ್ಯನಾಥ್ ಅವರು ತಮ್ಮ ಅವಧಿಯಲ್ಲಿ ಅನೇಕ ಅನುಚಿತ, ದಮನಕಾರಿ, ಕಿರುಕುಳ ಮತ್ತು ತಾರತಮ್ಯದ ಕ್ರಮಗಳನ್ನು ಕೈಗೊಂಡಿದ್ದಾರೆ. ಅವರನ್ನು ಚುನಾವಣೆಯಲ್ಲಿ ಮಣಿಸಬೇಕು. ಹೀಗಾಗಿ ಅಮಿತಾಬ್ ಅವರು ಆದಿತ್ಯನಾಥ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ” ಎಂದು ನೂತನ್ ಠಾಕೂರ್ ಹೇಳಿದ್ದಾರೆ.
ಇದನ್ನೂ ಓದಿ:ಉತ್ತರ ಪ್ರದೇಶ ಸಿ-ವೋಟರ್ ಸಮೀಕ್ಷೆ: ಮತ್ತೆ ಅಧಿಕಾರ ಹಿಡಿಯಲಿದೆ ಬಿಜೆಪಿ; ಕಾಂಗ್ರೆಸ್ ಕಳಪೆ ಪ್ರದರ್ಶನ ಸಾಧ್ಯತೆ!
ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಅವರಿಗೆ ಬೆದರಿಕೆ ಹಾಕಿದ ಆರೋಪ ಹೊತ್ತಿದ್ದ ಅಮಿತಾಬ್ ಠಾಕೂರ್ ಅವರಿಗೆ ಕೇಂದ್ರ ಗೃಹ ಸಚಿವಾಲಯವು ಮಾರ್ಚ್ 23 ರಂದು ಕಡ್ಡಾಯ ನಿವೃತ್ತಿ ನೀಡಿತ್ತು. ಅಲ್ಲದೆ, ಠಾಕೂರ್ ಅವರು ಸೇವೆಯಲ್ಲಿ ಮುಂದುವರೆಯಲು ಯೋಗ್ಯವಾಗಿಲ್ಲ. ಅವರಿಗೆ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಅಕಾಲಿಕ ನಿವೃತ್ತಿ ನೀಡಲಾಗಿದೆ ಎಂದು ತನ್ನ ಪ್ರಕಟಣೆಯಲ್ಲಿ ಹೇಳಿತ್ತು.
ಅಮಿತಾಬ್ ಠಾಕೂರ್ ಅವರ ಸೇವಾವಧಿ 2028 ರಲ್ಲಿ ಅಂತ್ಯಗೊಳ್ಳಿತ್ತು. ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಅಧಿಕಾರಿಯನ್ನು ಜುಲೈ 13, 2015 ರಂದು ಅಮಾನತುಗೊಳಿಸಲಾಗಿತ್ತು. ಆದಾಗ್ಯೂ, ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯ ಲಕ್ನೋ ಪೀಠವು 2016 ರ ಏಪ್ರಿಲ್ನಲ್ಲಿ ಅವರ ಅಮಾನತಿಗೆ ತಡೆ ನೀಡಿತು. ಅಲ್ಲದೆ, ಅಕ್ಟೋಬರ್ 11, 2015 ರಿಂದ ಜಾರಿಗೆ ಬರುವಂತೆ ಪೂರ್ಣ ವೇತನದೊಂದಿಗೆ ಅವರನ್ನು ಮತ್ತೆ ಸೇವೆಯಲ್ಲಿ ಮುಂದುವರೆಸುವಂತೆ ಆದೇಶಿಸಿತ್ತು. ಇದೆಲ್ಲದರ ನಡುವೆ ಇದೂಗ ಅವರಿಗೆ ಕಡ್ಡಾಯ ನಿವೃತ್ತಿ ನೀಡಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ 2 ವರ್ಷದಲ್ಲಿ 1168 ಅತ್ಯಾಚಾರ ಪ್ರಕರಣಗಳು ದಾಖಲು; ದಿನಕ್ಕೆ ಕನಿಷ್ಟ ಒಂದು ಅತ್ಯಾಚಾರ!

