ಮೈಸೂರು ಅತ್ಯಾಚಾರ ಪ್ರಕರಣ : ನಾಡಿಗೆ ಶುಭ ಸುದ್ದಿಕೊಟ್ಟ ಪೊಲೀಸರಿಗೆ ಗೃಹ ಸಚಿವರಿಂದ ಅಭಿನಂದನೆ..!

ಮೈಸೂರು ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳನ್ನು ಬಂಧಿಸುವ ಮೂಲಕ ನಾಡಿಗೆ ಸಿಹಿ ಸುದ್ದಿ ಕೊಟ್ಟ ಪೋಲೀಸರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಮಾನವೀಯ ಕೃತ್ಯ ಮೈಸೂರಿನಲ್ಲಿ ನಡೆದಿದೆ. ಪ್ರವಾಸಿಗರು ಸೇರುವಂತ ಸ್ಥಳ ಮೈಸೂರು. ಈ ಕೃತ್ಯ ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿತ್ತು. ಪೊಲೀಸರು ನೀಚ ಕೃತ್ಯ ಮಾಡುವಂತವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಐವರು ಆರೋಪಿಗಳನ್ನು ಬಂಧಿಸುವ ಮೂಲಕ ವಿಕೃತ ಮನಸ್ಸಿನ ವ್ಯಕ್ತಿಗಳಿ ಒಂದು ಒಳ್ಳೆ ಸಂದೇಶ ಪಾಸ್ ಮಾಡಿದ್ದಾರೆ. ಈ ಕಾರ್ಯಚರಣೆಯಲ್ಲಿ ಭಾಗಿಯಾದವರಿಗೆ ನನ್ನ ಅಭಿನಂದನೆಗಳು” ಎಂದು ಹೇಳಿದರು.

ಜೊತೆಗೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಈ ಕಾರ್ಯ ನಡೆದಿದ್ದು ಸವಾಲನ್ನು ಸ್ವೀಕಾರ ಮಾಡಿ ನಾಡಿಗೆ ಒಳ್ಳೆ ಸುದ್ದಿ ನೀಡಿದ್ದಾರೆ. ಕಾರ್ಯಚರಣೆಯಲ್ಲಿ ಭಾಗವಹಿಸಿದ ಪೊಲೀಸರಿಗೆ 5 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ.

ಆಗಸ್ಟ್ 24 ರಂದು ಮೈಸೂರು ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಆರು ಆರೋಪಿಗಳ ಪೈಕಿ ಐವರನ್ನು ಇಂದು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ. ಆರೋಪಿಗಳ ಬಂಧನದ ಬಗ್ಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಕೂಡ ವಿವರಣೆ ನೀಡಿದ್ದಾರೆ.

ಮೈಸೂರು ಅತ್ಯಾಚಾರಿಗಳ ಕ್ರೈಂ ಡೈರಿ ತೆರೆದಿಟ್ಟ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights