ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟ ಸಂಪೂರ್ಣ ನಿಷೇಧ: ಯೋಗಿ ಆದಿತ್ಯನಾಥ್‌

ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ.

ಮಥುರಾದಲ್ಲಿ ನಡೆದ ಕೃಷ್ಣೋತ್ಸವ 2021 ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್‌, “ನಿಷೇಧಕ್ಕಾಗಿ ಯೋಜನೆಗಳನ್ನು ರೂಪಿಸಲು ಮತ್ತು ಇಂತಹ ವ್ಯಾಪಾರಗಳಲ್ಲಿ ತೊಡಗಿರುವ ಜನರನ್ನು ಗುರುತಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ಮದ್ಯ ಮತ್ತು ಮಾಂಸ ವ್ಯಾಪಾರದಲ್ಲಿ ತೊಡಗಿರುವವರು ತಮ್ಮ ವ್ಯಾಪಾರವನ್ನು ತೊರೆಯಬೇಕು. ಮಥುರಾದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಪ್ರಾಣಿಗಳ ಹಾಲನ್ನು ಉತ್ಪಾದಿಸಲಾಗುತ್ತದೆ. ಹೀಗಾಗಿ, ಮಥುರಾ ವೈಭವವನ್ನು ಪುನರುಜ್ಜೀವನಗೊಳಿಸಲು ಹಾಲಿನ ಮಾರಾಟವನ್ನು ಕೈಗೊಳ್ಳಬಹುದು ಎಂದು ಅವರು ಸಲಹೆ ನೀಡಿದ್ದಾರೆ.

“ಯಮುನಾ ನದಿ ತೀರದಲ್ಲಿರುವ ಬ್ರಿಜ್ ಭೂಮಿಯನ್ನು ಅಭಿವೃದ್ಧಿಪಡಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತದೆ. ಇದಕ್ಕೆ ಯಾವುದೇ ಹಣದ ಕೊರತೆ ಇರುವುದಿಲ್ಲ. ನಾವು ಈ ಪ್ರದೇಶದ ಅಭಿವೃದ್ಧಿಗೆ ಆಧುನಿಕ ತಂತ್ರಜ್ಞಾನದೊಂದಿಗೆ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯ ಮಿಶ್ರಣವನ್ನು ನೋಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಬಹಳ ಹಿಂದಿನಿಂದಲೂ ನಿರ್ಲಕ್ಷಿಸಲ್ಪಟ್ಟ ನಂಬಿಕೆಯ ಸ್ಥಳಗಳು ಈಗ ಪುನರುಜ್ಜೀವನಗೊಳ್ಳುತ್ತಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸುವೇಂದು ಅಧಿಕಾರಿ v/s ದಿಲೀಪ್ ಘೋಷ್: ಬಂಗಾಳ ಬಿಜೆಪಿಯಲ್ಲಿ ಬಿರುಕು; ಸಮನ್ವಯಕ್ಕಿಂತ ಹೆಚ್ಚಿದ ಸಂಘರ್ಷ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights