ಪಂಜಾಬ್: ಅಕಾಲಿದಳದ ಕಾರ್ಯಕ್ರಮಕ್ಕೆ ತಡೆಯೊಡ್ಡಿದ ರೈತರ ಮೇಲೆ ಲಾಠಿಚಾರ್ಜ್‌!

ಪಂಜಾಬ್‌ನ ಪ್ರಾದೇಶಿಕ ಪಕ್ಷ ಶಿರೋಮಣಿ ಅಕಾಲಿದಳವು ಮೊಗಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತಡೆಯೊಡ್ಡಲು ಯತ್ನಿಸಿದ ಆರೋಪದಲ್ಲಿ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದು, ಜಲಫಿರಂಗಿಯನ್ನು ಬಳಸಿದ್ದಾರೆ.

ಪಂಜಾಬ್‌ನಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಸ್‌ಎಡಿ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಇತ್ತೀಚೆಗೆ ಪಂಜಾಬ್‌ನ ನೂರು ವಿಧಾನಸಭಾ ಕ್ಷೇತ್ರಗಳಲ್ಲಿ 100 ದಿನಗಳ “ಯಾತ್ರೆಯನ್ನು” ಆರಂಭಿಸಿದ್ದಾರೆ.

ಇದರ ಭಾಗವಾಗಿ ಗುರುವಾರ ಮೊಗಾದ ಮೊಗಾದ ಧಾನ್ಯ ಮಾರುಕಟ್ಟೆಯಲ್ಲಿನ ಎಸ್‌ಎಡಿ ಕಾರ್ಯಕ್ರಮ ಆಯೋಜಿಸಿತ್ತು. ಈ ಸಮಾವೇಶದ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಕೆಲವು ರೈತ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಬೆ: ಒಂದೇ ಘಟನೆಗೆ ಐದು ಎಫ್‌ಐಆರ್‌; ನಾಲ್ಕು FIR ರದ್ದುಗೊಳಿಸಿದ ಹೈಕೋರ್ಟ್‌!

ನಾವು ಅವರಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದೆವು. ಆದರೆ ಕೆಲವು ಪ್ರತಿಭಟನಾಕಾರರು ಕಲ್ಲು ತೂರಾಟಕ್ಕೆ ಮುಂದಾದರು ಹಾಗಾಗಿ ಅವರನ್ನು ಚದುರಿಸಲು ಪೊಲೀಸರು ಮತ್ತು ನೀರಿನ ಫಿರಂಗಿಗಳನ್ನು ಬಳಸಲಾಯಿತು ಎಂದು ಹೇಳಿದ್ದಾರೆ.

“ಅವರು ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದರು. ಕಲ್ಲುಗಳನ್ನು ಎಸೆದಾಗ, ಅವರನ್ನು ಚದುರಿಸಲು ನಾವು ಲಾಠಿ ಚಾರ್ಜ್ ಮಾಡಬೇಕಾಯಿತು. 600 ಪ್ರತಿಭಟನಾಕಾರರಲ್ಲಿ 35 ಜನರನ್ನು ಬಂಧಿಸಲಾಗಿದೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಮೊಗಾದ ಪೊಲೀಸ್ ವರಿಷ್ಠಾಧಿಕಾರಿ ಧ್ರುಮಾನ್ ನಿಂಬಾಲೆ ಹೇಳಿದ್ದಾರೆ.

ಇತ್ತಿಚೆಗಷ್ಟೆ ಹರಿಯಾಣದ ಕರ್ನಲ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಅಮಾನವೀಯ ಲಾಠಿಚಾರ್ಜ್ ಮಾಡಿದ್ದರು. 10 ಕ್ಕೂ ಹೆಚ್ಚು ರೈತರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಒರ್ವ ರೈತ ಸಾವನ್ನಪ್ಪಿದ್ದಾರೆ. ರೈತರ ತಲೆ ಬುರುಡೆ ಹೊಡೆಯಿರಿ ಎಂದು ಆದೇಶ ನೀಡಿದ್ದ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು, ಹರಿಯಾಣ ಮತ್ತ ಪಂಜಾಬ್‌ಗಳಲ್ಲಿ ರಾಜಕಾರಣಿಗಳ ಕಾರ್ಯಕ್ರಮಗಳಿಗೆ ತಡೆಯೊಡ್ಡುತ್ತಿದ್ದಾರೆ. ನಮ್ಮ ಬೇಡಿಕೆ ಈಡೇರಿಕೆಯಾಗುವವರೆಗೂ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.

ಇದನ್ನೂ ಓದಿ: ಕೊರೊನಾ: ರಾಜ್ಯದಲ್ಲಿ ಇಬ್ಬರೂ ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ 115 ಮಕ್ಕಳು

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights