ಬಂಗಾಳ ಬೈ ಎಲೆಕ್ಷನ್: ಮಮತಾ ಬ್ಯಾನರ್ಜಿ ವಿರುದ್ದ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕೆ!

ಪಶ್ಚಮ ಬಂಗಾಳದಲ್ಲಿ ಉಪಚುನಾವಣೆ ಘೋಷಙೆಯಾಗಿದ್ದು, ಭವಾನಿಪುರ ವಿಧಾನಸಭೆ ಕ್ಷೇತ್ರದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ  ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಕಣಕ್ಕಿಳಿಯಲಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳೆದ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ‌ಸುವೇಂದು ಅಧಿಕಾರಿ ವಿರುದ್ದ ಸ್ಪರ್ಧಿಸಿ ಸೋತಿದ್ದರು. ಅದೇ ವೇಳೆ, ಮಾಜಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ಅವರ ಕಾನೂನು ಸಲಹೆಗಾರರಾಗಿದ್ದ ಪ್ರಿಯಾಂಕಾ ಟಿಬ್ರೆವಾಲ್ ಕೂಡ ಸೂಲುಂಡಿದ್ದರು.

ಹೀಗಾಗಿ, ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.

2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು.

ಸೆ.30ರಂದು ನಡೆಯುತ್ತಿರುವ ಉಪಚುನಾವಣೆಯಲ್ಲಿ ಮಮತಾ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇರಲು ಕಾಂಗ್ರೆಸ್‌ ನಿರ್ಧರಿಸಿದೆ. ಅಕ್ಟೋಬರ್‌ 3ರಂದು ಫಲಿತಾಂಶ ಪ್ರಕಟವಾಗಲಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights