ಪಂಜಾಬ್‌ ಸಿಎಂ ರಾಜೀನಾಮೆ ಕೇಳಿದ ಕಾಂಗ್ರೆಸ್‌ ಹೈಕಮಾಂಡ್‌; ಪಕ್ಷ ತೊರೆಯುವ ಬೆದರಿಕೆ ಹಾಕಿದ ಅಮರೀಂದರ್‌ ಸಿಂಗ್!

ಪಂಜಾಬ್‌ ಕಾಂಗ್ರೆಸ್‌ನಲ್ಲಿ ಬಂಡಾಯ, ಭಿನ್ನಮತದ ಕಾವು ಮುಂದುವರೆಯುತ್ತಲೇ ಇದೆ. ಅಲ್ಲಿನ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಮತ್ತು ಕಾಂಗ್ರೆಸ್‌ ರಾಜ್ಯಾಧ್ಯಕ್ಷ ನವಜೋಧ್‌ ಸಿಂಗ್‌ ಸಿಧು ನಡುವಿನ ಮನಸ್ಥಾಪದಿಂದಾಗಿ ರಾಜ್ಯದಲ್ಲಿ ಹೊಸ ನಾಯಕತ್ವವನ್ನು ತರಲು ಕಾಂಗ್ರೆಸ್‌ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಸಿಎಂ ಅಮರೀಂದರ್‌ ಸಿಂಗ್‌ ಅವರಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೇಳಿದೆ ಎಂದು ವರದಿಯಾಗಿದೆ.

ಶನಿವಾರ ಸಂಜೆ ಪಂಜಾಬ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಡೆಯಲಿದೆ. ಅದಕ್ಕೂ ಮುನ್ನ ಪಕ್ಷದ ಹೈಕಮಾಂಡ್ ಹೊಸ ನಾಯಕನ ಆಯ್ಕೆಗೆ ಅನುಕೂಲ ಮಾಡಿಕೊಡಲು ಅಮರೀಂದರ್‌ ಸಿಂಗ್‌ ರಾಜೀನಾಮೆ ನೀಡಬೇಕು ಎಂದು ಕೇಳಿದೆ ಎನ್ನಲಾಗಿದ್ದು, ಇಲ್ಲಿಗೆವರೆಗೂ ನಿರಾಳವಾಗಿದ್ದ ಅಮರೀಂದರ್‌ ಈಗ ಇಕ್ಕಿಟ್ಟಿನ ಸ್ಥಿತಿಯಲ್ಲಿದ್ದಾರೆ.

ಅಮರೀಂದರ್ ಅವರು ಇಂದು ಬೆಳಿಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರೊಂದಿಗೆ ಮಾತನಾಡಿದ್ದಾರೆ. ಅವರಿಗೆ ಪಕ್ಷವು  ಅವಮಾನ ಮಾಡಿದೆ. ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಅವರು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಮಾಜಿ ಪಿಸಿಸಿ (ಪಂಜಾಬ್ ಪ್ರದೇಶ ಕಾಂಗ್ರೆಸ್‌) ಅಧ್ಯಕ್ಷ ಸುನೀಲ್ ಜಖರ್ ಅವರ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗಿದೆ.

ಸೋನಿಯಾ ಗಾಂಧಿ ಅವರು ಅಮರೀಂದರ್‌ ಅವರಿಗೆ ಪಕ್ಷದ ಆಶಯದ ಬಗ್ಗೆ ಹೇಳಿದ್ದಾರೆ. ಅವರು ಶೀಘ್ರದಲ್ಲೇ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಅವರು ಪಕ್ಷವನ್ನೇ ತೊರೆಯುವುದಾಗಿ ಹೇಳಿದ್ದಾರೆ ಎಂದು ಇನ್ನೊಂದು ಮೂಲ ಹೇಳಿದೆ.

ಪಕ್ಷವು ಮುಂದಿನ ಮುಖ್ಯಮಂತ್ರಿಯನ್ನು ಶೀಘ್ರವೇ ನಾಮನಿರ್ದೇಶನ ಮಾಡಲು ಯೋಜಿಸುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕರ್ನಾಟಕ ಅಧಿವೇಶನ: ಆನ್‌ಲೈನ್ ಜೂಜು ನಿಷೇಧಕ್ಕೆ ಮಸೂದೆ ಮಂಡನೆ; ಅಂಗೀಕಾರವಾದರೆ ಅಪರಾಧಿಗಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights