ಬೆಲೆ ಏರಿಕೆ ಖಂಡಿಸಿ : ಕಾಂಗ್ರೆಸ್ ನಾಯಕರಿಂದ ಟಾಂಗಾ ಜಾಥಾ..!

ಎತ್ತಿನ ಗಾಡಿ ಆಯ್ತು, ಸೈಕಲ್ ಜಾಥಾ ಆಯ್ತು, ಈಗ ಟಾಂಗಾ ಜಾಥದ ಸರದಿ. ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಇಂದು ಟಾಂಗಾ ರ್ಯಾಲಿ ಮೂಲಕ ವಿಧಾನಸೌಧಕ್ಕೆ ತೆರಳಿದ್ದಾರೆ.

ಕೂಡಲೇ ತೈಲ ಬೆಲೆ ಏರಿಕೆಯನ್ನು ಇಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಇಂದು ಟಾಂಗಾ ಸವಾರಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗಾದಲ್ಲಿ ಸವಾರಿ ಮಾಡುವ ಮೂಲಕ ಸರ್ಕಾರದ ಗಮನ ಸೆಳೆದರು. ಈ ವೇಳೆ ಕೆಪಿಸಿಸಿ ಕಾರ್ಯಾದ್ಯಕ್ಷರಾದ ರಾಮಲಿಂಗರೆಡ್ಡಿ, ಈಶ್ವರ್ ಖಂಡ್ರೆ ಸೇರಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಜಾಥಾದಲ್ಲಿ ಭಾಗಿಯಾಗಿದ್ದಾರೆ.

ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿಕೆಯಾಗುತ್ತಿದ್ದು ಜನ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಸರ್ಕಾರ ಕೂಡಲೇ ಬೆಲೆ ಇಳಿಕೆ ಮಾಡಬೇಕೆಂದು ಆಗ್ರಹಿಸಿ ವಿಪಕ್ಷ ನಾಯಕರು ನೂತನವಾಗಿ ಪ್ರತಿಭಟನೆ ಮಾಡುವ ಮೂಲಕ ವಿಧಾನಸೌಧಕ್ಕೆ ತೆರಳಿದ್ದಾರೆ.

ವಿಧಾನಸೌಧಕ್ಕೆ ಟಾಂಗಾ ದಲ್ಲಿ ತೆರಳುವ ಮೂಲಕ ಜನ ಪರ ಧ್ವನಿ ಎತ್ತಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರೊಂದಿಗೆ ನೂರಾರು ಕಾರ್ಯಕರ್ತರು ಶಾಸಕರು ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights