ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್‌ ಸೇರುವುದಾಗಿ ಘೋಷಣೆ!

ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಭಾವಿ ದಲಿತ ನಾಯಕ, ಊನಾ ಚಳುವಳಿಯ ನೇತಾರ, ಶಾಸಕ ಜಿಗ್ನೇಶ್ ಮೇವಾನಿ ಅವರು ಕಾಂಗ್ರೆಸ್ ಸೇರುವ ನಿರ್ಧಾರ ಪ್ರಕಟಿಸಿದ್ದಾರೆ.

ಮಾಜಿ ಜೆಎನ್‌ಯು ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್ ಅವರೊಂದಿಗೆ ಸೆಪ್ಟೆಂಬರ್ 28 ರಂದು ಕಾಂಗ್ರೆಸ್ ಸೇರುವುದಾಗಿ ಜಿಗ್ನೇಶ್‌ ಮೇವಾನಿ ತಿಳಿಸಿದ್ದಾರೆ.

ಬಿಜೆಪಿ ಆಡಳಿತವಿರುವ ಗುಜರಾತ್ ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಮೇವಾನಿ ಅವರು 2017ರ ಚುನಾವಣೆಯಲ್ಲಿ ಬನಸ್ಕಾಂತ ಜಿಲ್ಲೆಯ ವಡ್ಗಾವ್‌ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.

“ಸೆಪ್ಟೆಂಬರ್ 28 ರಂದು, ನಾನು ಕನ್ಹಯ್ಯಾ ಕುಮಾರ್ ಜೊತೆಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರುತ್ತೇನೆ” ಎಂದು ಅವರು ಹೇಳಿದ್ದಾರೆ.

ಜಿಗ್ನೇಶ್‌ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸಲಿದ್ದು, ಅಲ್ಲಿ ಅವರನ್ನು ರಾಹುಲ್ ಗಾಂಧಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಗುಜರಾತ್ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಹೇಳಿದ್ದಾರೆ.

“ದೇಶದ ಅಭಿವೃದ್ಧಿಗಾಗಿ ಶ್ರಮಿಸಲು, ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಮತ್ತು ಮಹಾತ್ಮ ಗಾಂಧಿ, ಸರ್ದಾರ್ (ಪಟೇಲ್) ಮತ್ತು ನೆಹರು ಅವರ ಆದರ್ಶಗಳನ್ನು ಬಲಪಡಿಸಲು ಸಿದ್ಧರಿರುವ ಎಲ್ಲಾ ಕ್ರಾಂತಿಕಾರಿ ಯುವಕರನ್ನು ನಾವು ಸ್ವಾಗತಿಸುತ್ತೇವೆ” ಎಂದು ಹಾರ್ದಿಕ್ ಪಟೇಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅವರು ಮೇವಾನಿ ಅವರನ್ನು “ಹಳೆಯ ಸ್ನೇಹಿತ” ಎಂದು ವಿವರಿಸಿದರು ಮತ್ತು ಅವರ ಪ್ರವೇಶವು ಪಕ್ಷಕ್ಕೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಹಾಯ ಮಾಡುತ್ತದೆ ಎಂದು ಹೇಳಿದರು.

“ಬಿಜೆಪಿಯ ಭ್ರಷ್ಟ ನೀತಿಗಳ ವಿರುದ್ಧ ಹೋರಾಡುವ ಪ್ರತಿಯೊಬ್ಬರನ್ನು ಕಾಂಗ್ರೆಸ್ ಪಕ್ಷವು ಸ್ವಾಗತಿಸುತ್ತದೆ. ಪಕ್ಷದ ನೀತಿಯು ಗುಜರಾತ್‌ನಲ್ಲಿ ಎಲ್ಲರಿಗೂ ನ್ಯಾಯವನ್ನು ಖಾತ್ರಿಪಡಿಸುವುದು ಮತ್ತು ಬಿಜೆಪಿಯ ಜನವಿರೋಧಿ ನೀತಿಗಳ ವಿರುದ್ಧವೂ ಪಕ್ಷ ಹೋರಾಟುತ್ತದೆ” ಗುಜರಾತ್ ಕಾಂಗ್ರೆಸ್‌ ಹೇಳಿದೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ: ಇಬ್ಬರು ಬಿಜೆಪಿ ನಾಯಕರ ನಡುವೆ ವಾಕ್ಸಮರ; ವಿಡಿಯೋಗಳು ವೈರಲ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights