ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಹೃದಯಾಘಾತ; ಪ್ರಯಾಣಿಕ ಸಾವು
ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ವಿಸ್ತಾರ್ ಯುಕೆ818 ವಿಮಾನದಲ್ಲಿ ಬೆಂಗಳೂರಿನಿಂದ ಪ್ರಯಾಣ ದೆಹಲಿಗೆ ತೆರಳಯತ್ತದ್ದ ಮನೋಜ್ ಕುಮಾರ್ ಅಗರ್‍ವಾಲ್ ಅವರಿಗೆ ನಿನ್ನೆ ರಾತ್ರಿ 9.30ರ ಸುಮಾರಿನಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ, ಮಾರ್ಗ ಮಧ್ಯೆಯೇ ಇಂಧೋರ್‌ನ ದೇವಿ ಅಹಿಲ್ಯಬಾಯಿ ಹೋಲ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಇಳಿಸಲಾಗಿದೆ.
ಇಂಧೋರ್ ವಿಮಾನ ನಿಲ್ದಾಣದ ಸಮೀಪವೇ ಇದ್ದ ಬಂತೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತು. ಆದರೆ, ಆ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸುನೀಲ್ ಬಂತೀಯ ತಿಳಿಸಿದ್ದಾರೆ.
ತೀವ್ರ ಹೃದಯಘಾತದಿಂದ ಅಗರ್‍ವಾಲ್ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಹೇರೋಡ್ರಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ಗೆಲುವು; ಮಹಿಳಾ ಸೇನಾ ಅಧಿಕಾರಿಗಳಿಗೆ ಖಾಯಂ ಆಯೋಗ ರಚನೆಗೆ ಆದೇಶ!

